ಬೈಂದೂರು: ಗ್ರಾಮ ಪಂಚಾಯತ್ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ, ರೋರ್ಯಾಕ್ಟ್ ಕ್ಲಬ್ ಗಂಗೊಳ್ಳಿ, ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ, ಸ.ವಿ ಪದವಿಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ, ಗಂಗೋತ್ರಿ ಸಂಜೀವಿನಿ ಗ್ರಾಮ ಒಕ್ಕೂಟ ಗಂಗೊಳ್ಳಿ, ಎಸ್.ಎಲ್.ಆರ್.ಎA ಘಟಕ ಗಂಗೊಳ್ಳಿ ಅವರ ಸಂಯುಕ್ತ ಆಶ್ರಯದಲ್ಲಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಸ್ವಚ್ಛ ಸಾಗರ ಸುರಕ್ಷಿತ ಸಾಗರ ಅಭಿಯಾನ ಕಾರ್ಯಕ್ರಮ ಕುಂದಾಪುರ ತಾಲೂಕಿನ ಗಂಗೊಳ್ಳಿ ಕಡಲ ತೀರದಲ್ಲಿ ಶನಿವಾರ ನಡೆಯಿತು.
ಸ್ವಚ್ಛ ಸಾಗರ ಸುರಕ್ಷಿತ ಸಾಗರ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಗಂಗೊಳ್ಳಿ ಕಡಲ ತೀರದಲ್ಲಿ ಬಿದ್ದಿದ್ದ ಪ್ಲಾಸ್ಟಿಕ್, ಬಾಟಲಿಗಳು, ನಿರೂಪಯುಕ್ತ ತ್ಯಾಜ್ಯಗಳನ್ನು ಸಂಗ್ರಹಿಸಿ ಕಡಲ ತೀರವನ್ನು ಸ್ವಚ್ಛಗೊಳಿಸಲಾಯಿತು, ಬಳಿಕ ಸಮುದ್ರಪೂಜೆ ನೆರವೇರಿಸಿ ಗ್ರಾಮಸ್ಥರ ಶ್ರೇಯೋಭಿವೃದ್ಧಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಗಂಗೊಳ್ಳಿ ಗ್ರಾ.ಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಮತ್ತು ನಾನಾ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.