ಉಡುಪಿ: ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಹಂಪನಕಟ್ಟೆ ಬಳಿ ಇಂದು ನಡೆದಿದೆ.
ಗಂಭೀರ ಗಾಯಗೊಂಡ ಚಾಲಕನನ್ನು ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಿಕ್ಷಾ ಹಂಪನಕಟ್ಟೆಯಿಂದ ಸಂತೆಕಟ್ಟೆ ಕಡೆಗೆ ತೆರಳುತ್ತಿದ್ದು, ಕಾರು ಸಂತೆಕಟ್ಟೆಯಿಂದ ಹಂಪನಕಟ್ಟೆ ಕಡೆಗೆ ಸಾಗುತ್ತಿತ್ತು ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರು ಮತ್ತು ರಿಕ್ಷಾ ನಜ್ಜುಗುಜ್ಜಾಗಿದೆ.
ಕಾರು- ರಿಕ್ಷಾ ನಡುವೆ ಅಪಘಾತ : ರಿಕ್ಷಾ ಚಾಲಕನಿಗೆ ಗಂಭೀರ ಗಾಯ
Photo Credit :
NewsKarnataka
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.