News Karnataka Kannada
Wednesday, April 17 2024
Cricket
ಉಡುಪಿ

ಲಾರಿ- ಬೈಕ್ ಮಧ್ಯೆ ಭೀಕರ ಅಪಘಾತ : ಸವಾರ ಮೃತ್ಯು, ಮತ್ತೋರ್ವ ಗಂಭೀರ

ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
Photo Credit : NewsKarnataka

ಉಡುಪಿ: ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಮಧ್ಯಾಹ್ನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಭೀಕರ ಘಟನೆ ನಡೆದಿದೆ. ಮೃತ ಸವಾರನನ್ನು ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಅಬ್ದುಲ್ ಖಾದರ್ ಎಂಬುವರ ಮಗ ಮೊಹಮ್ಮದ್ ಕಾಶಿಫ್ (17) ಎಂದು ಗುರುತಿಸಲಾಗಿದೆ. ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಮೊಹಮ್ಮದ್ ಫೈಜ್ (14) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ‌. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗಸ್ತು ವಾಹನ ಸ್ಥಳಕ್ಕಾಗಮಿಸಿ ರಸ್ತೆ ಸಂಚಾರ ಸುಗಮಗೊಳಿಸಿತು. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು