News Karnataka Kannada
Thursday, May 02 2024
ಉಡುಪಿ

ಲಾರಿ- ಸ್ಕೂಟರ್ ಮಧ್ಯೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು

ಹ್ಮಾವರ ತಾಲೂಕಿನ ಉಪ್ಪೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Photo Credit : NewsKarnataka

ಉಡುಪಿ: ಬ್ರಹ್ಮಾವರ ತಾಲೂಕಿನ ಉಪ್ಪೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಹೇರೂರು ನಿವಾಸಿ ಕೃಷ್ಣ ಗಾಣಿಗ ಎಂದು ಗುರುತಿಸಲಾಗಿದೆ. ಕೃಷ್ಣ ಅವರು ಸಂತೆಕಟ್ಟೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ದುರಸ್ತಿ ಕಾಮಗಾರಿಯಿಂದಾಗಿ ಸಂಚಾರ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ರಸ್ತೆಯನ್ನು ಏಕ ಪಥಕ್ಕೆ ಮಾರ್ಪಾಡುಗೊಳಿಸಲಾಗಿತ್ತು. ದುರದೃಷ್ಟವಶಾತ್ ಎದುರಿನಿಂದ ಬರುತ್ತಿದ್ದ ಲಾರಿಗೆ ಕೃಷ್ಣ ಅವರು ಡಿಕ್ಕಿ ಹೊಡೆದಿದ್ದು, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೃಷ್ಣ ಅವರು ಉಡುಪಿ ನಗರಸಭೆ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಪರದಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು