ಉಡುಪಿ

ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ ಹೆಚ್ಚುವರಿ 25 ಲಕ್ಷ ಲೀಟರ್ ಸೀಮೆಎಣ್ಣೆ ಬಿಡುಗಡೆ

ಉಡುಪಿ: ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ ಹೆಚ್ಚುವರಿ 2500ಕೆಎಲ್ (25 ಲಕ್ಷ ಲೀಟರ್) ಸೀಮೆ ಎಣ್ಣೆ ಬಿಡುಗಡೆಯಾಗಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2022-23 ಸಾಲಿನಲ್ಲಿ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವಾಲಯ ಕರ್ನಾಟಕ ರಾಜ್ಯದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮಿನುಗಾರರಿಗೆ ಒಟ್ಟು 5472 ಕೆ.ಎಲ್. ಸೀಮೆ ಎಣ್ಣೆಯನ್ನು ಹಂಚಿಕೆ ಮಾಡಿತ್ತು. ಅದರಂತೆ ಹಂತಹಂತವಾಗಿ ರಾಜ್ಯದ ಮೀನುಗಾರರ ಸೌಲಭ್ಯಕ್ಕಾಗಿ 2472KL + 3000KL ಸೀಮೆ ಎಣ್ಣೆಯನ್ನು ಬಿಡುಗೊಡೆಗೊಳಿಸಿತ್ತು. ಇಂದು ಪೆಟ್ರೋಲಿಯಂ ಸಚಿವಾಲಯ ಹೆಚ್ಚುವರಿಯಾಗಿ 2500 ಕೆ.ಎಲ್. ಸೀಮೆ ಎಣ್ಣೆಯನ್ನು ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸೌಲಭ್ಯಕ್ಕಾಗಿ ಬಿಡುಗಡೆಗೊಳಿಸಿ ಆದೇಶ ಮಾಡಿದೆ ಎಂದು ಅವರು‌ ತಿಳಿಸಿದರು.

ಕೇಂದ್ರ ಸರ್ಕಾರ 2022-23ರ ಸಾಲಿನ ಅವಧಿಯ ಹಂಚಿಕೆಗಿಂತಲೂ ಹೆಚ್ಚಿನ ಪ್ರಮಾಣದ ಸೀಮೆ ಎಣ್ಣೆಯನ್ನು ರಾಜ್ಯದ ಮೀನುಗಾರರಿಗೆ ಬಿಡುಗಡೆಗೊಳಿಸಿದೆ. ಒಟ್ಟಾರೆಯಾಗಿ 7972 ಕೆ.ಎಲ್. (5472 ಕೆ.ಎಲ್.+2500ಕೆ.ಎಲ್.) ಸೀಮೆ ಎಣ್ಣೆ ಹಂಚಿಕೆಯನ್ನು 2022-23ನೆ ಸಾಲಿನಲ್ಲಿ ರಾಜ್ಯದ ಕರಾವಳಿ ಮೀನುಗಾರರು ಕೇಂದ್ರದಿಂದ ಪಡೆದುಕೊಂಡಿದ್ದಾರೆ.

ಕರಾವಳಿ ಪ್ರದೇಶದ ಮೀನುಗಾರರ ಅಗತ್ಯಕ್ಕೆ ತಕ್ಕಂತೆ ಕೇಂದ್ರ ಸರ್ಕಾರ ಸ್ಪಂದನೆಯನ್ನು ನೀಡಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವರಲ್ಲಿ ಮನವಿಯಲ್ಲಿ ಮಾಡಲಾಗಿತ್ತು. ಕರಾವಳಿ ಪ್ರದೇಶದ ಜೀವನಾಧಾರ ಮೀನುಗಾರಿಕೆ.

ಮೀನುಗಾರಿಕೆಯನ್ನೆ ಬಹುಪಾಲು ಜನರು ನಂಬಿಕೊಂಡು ಜೀವನ ಮಾಡುತ್ತಿದ್ದಾರೆ. ಆದ್ದರಿಂದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ಮೀನುಗಾರರ ಮನವಿಯನ್ನು ಪರಿಗಣಿಸಬೇಕೆಂದು ಒತ್ತಾಯಪೂರ್ವಕವಾಗಿ ಶೋಭಾ ಕರಂದ್ಲಾಜೆಯವರು ಮನವಿ ಮಾಡಿದ್ದರು. ಅದರಂತೆ ಕೇಂದ್ರದ ಪೆಟ್ರೋಲಿಯಂ ಸಚಿವರಾದ ಹರದೀಪ ಸಿಂಗ್ ಪುರಿಯವರು ಮನವಿಗೆ ಸ್ಪಂದಿಸಿ, ಮೀನುಗಾರರ ಬೇಡಿಕೆಯನ್ನು ಈಡೇರಿಸಿದ್ದಾರೆ.

Gayathri SG

Recent Posts

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

9 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

33 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

48 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

1 hour ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

1 hour ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

2 hours ago