News Karnataka Kannada
Saturday, May 04 2024
ಉಡುಪಿ

ಚಾಮರಾಜನಗರ: ಚೆಕ್‌ಪೋಸ್ಟ್ ಗಳಿಗೆ ವೆಚ್ಚ ವೀಕ್ಷಕರ ಭೇಟಿ

Chamarajanagar: Expenditure observers visit check posts
Photo Credit : By Author

ಚಾಮರಾಜನಗರ: ಚುನಾವಣಾ ವೆಚ್ಚ ವೀಕ್ಷಕರಾದ ಹಿಮಾಂಶು. ಪಿ. ಜೋಶಿ ಅವರು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ ಬಳಿಕ ವಿವಿಧ ಚೆಕ್‌ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದಂತೆ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ, ಇನ್ನಿತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚುನಾವಣಾ ಆಯೋಗದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡಿದರು.

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ನಿಯೋಜನೆಗೊಂಡಿರುವ ಸ್ಥಾಯಿ ಸರ್ವೇಕ್ಷಣಾ ತಂಡ, ವೀಡಿಯೋ ಸರ್ವೇಕ್ಷಣಾ ತಂಡ, ವೆಚ್ಚ ಮೇಲ್ವಿಚಾರಣೆ, ವೀಡಿಯೋ ವೀಕ್ಷಣೆ ಹಾಗೂ ನಿರ್ವಹಣೆ, ಫ್ಲೈಯಿಂಗ್ ಸ್ಕ್ವಾಡ್ ತಂಡ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ದಕ್ಷತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಬೇಕೆಂದು ಚುನಾವಣಾ ವೆಚ್ಚ ವೀಕ್ಷಕರು ಸೂಚನೆ ನೀಡಿದರು.

ಬಳಿಕ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಮೂಲೆಹೊಳೆ, ಕೆಕ್ಕನಹಳ್ಳ ಅಂತರ ರಾಜ್ಯ ಚೆಕ್‌ಪೋಸ್ಟ್ ಹಾಗೂ ಹಿರಿಕಾಟಿ, ಕುರುಬರಹುಂಡಿ ಅಂತರ ಜಿಲ್ಲಾ ಚೆಕ್‌ಪೋಸ್ಟ್ ಗಳಿಗೆ ಭೇಟಿ ನೀಡಿ ಕಾರ್ಯನಿರ್ವಹಣೆ ಪರಿಶೀಲಿಸಿದರು. ಚೆಕ್‌ಪೋಸ್ಟ್ ಗಳಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳಿಂದ ತಪಾಸಣೆ ಸೇರಿದಂತೆ ಕೈಗೊಳ್ಳಲಾಗುತ್ತಿರುವ ಕರ್ತವ್ಯ ನಿರ್ವಹಣೆ ಕುರಿತು ವೆಚ್ಚ ವೀಕ್ಷಕರಾದ ಹಿಮಾಂಶು. ಪಿ. ಜೋಶಿ ಅವರು ವಿವರವಾದ ಮಾಹಿತಿ ಪಡೆದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು