News Karnataka Kannada
Friday, May 17 2024
ಉಡುಪಿ

ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ : ಕೆ. ಜಯಪ್ರಕಾಶ್ ಹೆಗ್ಡೆ

Change in society is possible only through education: K Chandrasekhar Rao Jayaprakash Hegde
Photo Credit : News Kannada

ಉಡುಪಿ: ಕಲಿಕೆಯು ನಿರಂತರ ಪ್ರಕ್ರಿಯೆಯಾಗಿದ್ದು, ಇದಕ್ಕೆ ಅಂತ್ಯ ಹಾಗೂ ವಯಸ್ಸಿನ ಮಿತಿ ಇಲ್ಲ. ಸಮಾಜದಲ್ಲಿ ಬದಲಾವಣೆ ತರಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.

ಅವರು ಇಂದು ಬ್ರಹ್ಮಾವರದ ಶ್ಯಾಮಿಲಿ ಶನಾಯ ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ವಲಯ ಹಾಗೂ ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಇವರ ಸಹಯೋಗದಲ್ಲಿ ಡಾ. ಎಸ್ ರಾಧಾಕೃಷ್ಣನ್ ಜನ್ಮ ದಿನಾಚರಣೆ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಸ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಮಕ್ಕಳನ್ನು ತಿದ್ದಿ, ಅವರುಗಳಿಗೆ ಉತ್ತಮ ವಿಚಾರಗಳನ್ನು ಬೋಧಿಸಿ, ಅವರುಗಳನ್ನು ಸಮಾಜದಲ್ಲಿ ಶಿಕ್ಷಣವಂತರಾಗಿ ನಿಲ್ಲುವಂತೆ ಮಾಡುವವರು ಶಿಕ್ಷಕರು. ರಾಷ್ಟ್ರಕವಿ ಕುವೆಂಪು ರವರ ವ್ಯಾಖ್ಯಾನದಂತೆ ಸಮಾಜವು ಶಾಂತಿಯ ತೋಟವಾಗಲು ಪ್ರಾರಂಭವಾಗುವುದು ಪ್ರಾಥಮಿಕ ಶಿಕ್ಷಣದಿಂದ. ರಾಜ್ಯದ ಅಭಿವೃದ್ಧಿಗೆ ಮೊದಲು ಆರೋಗ್ಯ ಮತ್ತು ಶಿಕ್ಷಣವೇ ಮೂಲ. ಜೀವನದಲ್ಲಿ ತಾಳ್ಮೆ ಬಹಳ ಮುಖ್ಯ. ಶಾಲೆಯಲ್ಲಿ ಶಿಕ್ಷಕರ ನಡುವೆ ಸೌಹಾರ್ದ ವಾತಾವರಣ ನಿರ್ಮಾಣವಾದಾಗ ಮಾತ್ರ ಉತ್ತಮ ಫಲಿತಾಂಶ ಕಂಡುಕೊಳ್ಳಬಹುದು ಎಂದರು.

ಮಕ್ಕಳು ದೈಹಿಕ ಹಾಗೂ ಮಾನಸಿಕವಾಗಿ ಶಕ್ತರಾದಾಗ ಮಾತ್ರ ಅವರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ. ಅವರಲ್ಲಿ ಸ್ಪರ್ಧಾತ್ಮಕ ಮನೋಭಾವ ಮೂಡಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಶಿಕ್ಷಣದ ಗುಣಮಟ್ಟವನ್ನು ಉಳಿಸಿಕೊಳ್ಳುವುದರ ಜೊತೆಗೆ ಶಿಕ್ಷಣದಲ್ಲಿ ಮುಂದೆ ಬರುವಂತೆ ಮಕ್ಕಳಿಗೆ ಪೋತ್ಸಾಹ ನೀಡಬೇಕು. ವಿದ್ಯಾರ್ಥಿಗಳಲ್ಲಿ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಶಿಕ್ಷಕರು ಮೂಡಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಗುರು ಎಂದರೆ ಜ್ಞಾನ ನೀಡುವವರು. ಸಮಾಜದಲ್ಲಿ ಮುಖ್ಯವಾಗಿ ಗುರುಗಳು ಹಾಗೂ ವೈದ್ಯರನ್ನು ಪ್ರತಿಯೊಬ್ಬರೂ ಗೌರವಿಸುತ್ತಾರೆ. ಮಕ್ಕಳನ್ನು ಉತ್ತಮ ಪ್ರಜೆಗಳಾಗಿ ರೂಪಿಸುವಂತವರು ಶಿಕ್ಷಕರಾದರೆ, ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವವರು ವೈದ್ಯರು. ಮಕ್ಕಳನ್ನು ತಿದ್ದಿ, ಅವರನ್ನು ಸರಿ ದಾರಿಗೆ ತಂದು ಸಮಾಜದಲ್ಲಿ ಪರಿಪಕ್ವ ವ್ಯಕ್ತಿಗಳನ್ನಾಗಿ ಮಾಡುವವರು ಶಿಕ್ಷಕರು. ಆ ಸ್ಥಾನಕ್ಕೆ ಇರುವ ಗೌರವವನ್ನು ಅರಿತು ಶಿಕ್ಷಕರು ಕೆಲಸ ಮಾಡಬೇಕು ಎಂದರು.

ಮಕ್ಕಳ ಮೊದಲ ರೋಲ್ ಮಾಡೆಲ್ ಶಿಕ್ಷಕರಾಗಿದ್ದು, ಅವರು ಆ ಸ್ಥಾನವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಜಿಲ್ಲೆಯನ್ನು ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ತರುವಲ್ಲಿ ಎಲ್ಲರೂ ತಂಡವಾಗಿ ಕರ್ತವ್ಯ ನಿರ್ವಹಿಸಬೇಕು. ಶಿಕ್ಷಕರು ವೃತ್ತಿ ಜೀವನದ ಜೊತೆಗೆ ತಮ್ಮ ಕುಟುಂಬಕ್ಕೂ ಸಮಯವನ್ನು ಮೀಸಲಿಡುವಂತೆ ತಿಳಿಸಿದರು.

ಶಾಸಕ ಯಶ್‌ಪಾಲ್ ಎ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದರು. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಕಿರಿಯ ಪ್ರಾಥಮಿಕ ಶಾಲಾ ವಿಭಾಗ, ಪ್ರಾಥಮಿಕ ಶಾಲಾ ವಿಭಾಗ ಹಾಗೂ ಪ್ರೌಢಶಾಲಾ ವಿಭಾಗದ ತಲಾ 5 ಜನ ಸೇರಿದಂತೆ ಒಟ್ಟು 15 ಮಂದಿಗೆ ಪ್ರಶಸ್ತಿ ನೀಡಿ, ಸನ್ಮಾನಿಸಲಾಯಿತು.

ಮಾಹೆ ಸಹಕುಲಾಧಿಪತಿ ಡಾ. ಹೆಚ್.ಎಸ್ ಬಲ್ಲಾಳ್ ಉಪನ್ಯಾಸ ನೀಡಿದರು. ಶಿಕ್ಷಕರಿಗೆ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ನಡೆಯಿತು. ಶಿಕ್ಷಕಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮ ಶೆಟ್ಟಿ, ಜಿಲ್ಲಾ ಡಯಟ್‌ನ ಪ್ರಾಂಶುಪಾಲ ಗೋವಿಂದ ಮಡಿವಾಳ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥ್, ಉಡುಪಿಯ ಕ್ಷೇತ್ರ ಶಿಕ್ಷಣಾಧಿಕಾರಿ ಡಾ, ಅಶೋಕ್ ಕಾಮತ್, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಶಿಕ್ಷಕರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ ಸ್ವಾಗತಿಸಿ, ಶಿಕ್ಷಕರಾದ ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಹಾಗೂ ಸುಭಿಕ್ಷಾ ಕಾವಡಿ ನಿರೂಪಿಸಿದರೆ, ಬ್ರಹ್ಮಾವರ ತಾಲೂಕು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು