News Karnataka Kannada
Friday, April 19 2024
Cricket
ಉಡುಪಿ

ಚಿಕ್ಕೋಡಿ ದಿಗಂಬರ ಜೈನ ಮುನಿ ಹತ್ಯೆ: ಶಾಸಕ ವಿ. ಸುನಿಲ್ ಕುಮಾರ್ ಖಂಡನೆ

Jagadish Shettar's decision to switch sides is not a good development: Minister Sunil Kumar
Photo Credit : News Kannada

ಕಾರ್ಕಳ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈನ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ. ದಿಗಂಬರ ಮುನಿಗಳ ಹತ್ಯೆ ಮನಸ್ಸಿಗೆ ತೀವ್ರ ಅಘಾತ ತಂದಿದೆ. ಮನಸ್ಸನ್ನು ಅತೀವ ಘಾಸಿಗೊಳಿಸಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥ ಕೊಲೆಗಡುಕರಿಗೆ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

ಸಾಧು, ಸಂತರು ಶಾಂತಿ ಪ್ರೀಯರು. ದೇಶದ ಒಳಿತು. ಸಂಸ್ಕಾರ, ಸನಾತನ ಧರ್ಮದ ವಿಚಾರವಾಗಿ ಮಾರ್ಗದರ್ಶನ ನೀಡುವವರು. ಅಂತಹ ಸಾಧು ಸಂತರನ್ನೆ ಈ ರೀತಿ ಹೇಯವಾಗಿ ಕ್ರತ್ಯವೆಸಗಿ ಕೊಲೆ ಮಾಡಿರುವುದನ್ನು ಸಮಾಜ ಒಪ್ಪಲು ಸಾಧ್ಯವೇ ಇಲ್ಲ. ಹತ್ಯೆ ಕುರಿತು ಸೂಕ್ತ ತನಿಖೆ ನಡೆದು ತಪ್ಲಿತಸ್ಥರಿಗೆ ಶಿಕ್ಷೆಯಾಗಬೇಕು. ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಕೊಲೆಗಡುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ನಾಡಿನ ಸಾಧು ಸಂತರಿಗೆ ರಕ್ಷಣೆ ಒದಗಿಸುವಂತೆ ಅವರು ಆಗ್ರಹಿಸಿದ್ದಾರೆ.

ಜೈನಮುನಿಗಳ ಅಗಲುವಿಕೆಯಿಂದ ಜೈನ ಸಮಾಜವಲ್ಲದೆ ಇಡೀ ನಾಡು ದು;ಖತ್ರಪ್ತವಾಗಿದ್ದು ದಿಗಂಬರ ಮುನಿಗಳ ಅಗಲುವಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ಜನತೆಗೆ ಕರುಣಿಸಲೆಂದು ಅವರು ಪ್ರಾರ್ಥಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು