ದಕ್ಷಿಣ ಕನ್ನಡ: ಆಗಸ್ಟ್ 1ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಲಿದ್ದಾರೆ. ಉಡುಪಿ ಕಾಲೇಜು ವಿಡಿಯೋ ಪ್ರಕರಣದ ವಿವಾದದ ಕುರಿತು ಹಾಗೂ ಮಂಗಳೂರಿನಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದ ಹಿನ್ನೆಲೆ ಖುದ್ದು ಸಿಎಂ ಅವರು ತೆರಳಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ಇದಲ್ಲದೇ ಉಡುಪಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳು ಬಿಜೆಪಿ ತೆಕ್ಕೆಯಲ್ಲಿರುವಾಗ ಮುಂಬರುವ ಸ್ಥಳೀಯ ಸಂಸ್ಥೆ ಮತ್ತು ಲೋಕಸಭೆ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಉಡುಪಿ ಜಿಲ್ಲಾ ಕಾಂಗ್ರೆಸ್ ಗೆ ಉತ್ತೇಜನ ನೀಡುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಭೇಟಿ ಮಹತ್ವ ಪಡೆದುಕೊಂಡಿದೆ.