News Karnataka Kannada
Friday, May 03 2024
ಉಡುಪಿ

ಕುಂದಾಪುರ: ಹುಟ್ಟೂರು ಕರಾವಳಿಗೆ ಕಾಲಿಟ್ಟ ಕಾಮನ್‌ವೆಲ್ತ್ ಕ್ರೀಡಾಕೂಟದ ಕ್ರೀಡಾಪಟು ಗುರುರಾಜ್ ಪೂಜಾರಿ

Commonwealth Games 2022: Gururaja Poojary wins bronze medal in men's 61kg weightlifting
Photo Credit : Twitter

ಕುಂದಾಪುರ: ಕಾಮನ್‌ವೆಲ್ತ್ ಕ್ರೀಡಾಕೂಟದ 61 ಕೆಜಿ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ವಿಜೇತ ಕುಂದಾಪುರದ ಗುರುರಾಜ್ ಪೂಜಾರಿ ಹುಟ್ಟೂರು ಕರಾವಳಿಗೆ ಕಾಲಿಟ್ಟಿದ್ದು ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ದೂರಿಯ ಸ್ವಾಗತ ನೀಡಲಾಯಿತು.

ಈ ಸಂದರ್ಭ ಮಾತನಾಡಿದ ಅವರು, ಸಮರ್ಪಣಾ ಮನೋಭಾವ, ಕಠಿಣ ಪರಿಶ್ರಮ, ಪ್ರಾಮಾಣಿಕ ಪ್ರಯತ್ನ ಇದ್ದರೆ ಯಾವುದೇ ಸಾಧನೆ ಸಾಧ್ಯ. ಕಿರಿಯ ವಯಸ್ಸಿನಲ್ಲೇ ನಿಮ್ಮ ಆಸಕ್ತಿಯ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ಸಾಧನೆ ಖಂಡಿತಾ ಸಾಧ್ಯವಿದೆ ಎಂದರು.

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಎಲ್ಲಾ ಕ್ರೀಡಾಪಟುಗಳು ಉತ್ತಮ ಸಾಧನೆ ತೋರುತ್ತಿದ್ದಾರೆ. ಈ ಬಾರಿ ಹೆಚ್ಚಿನ ಪದಕಗಳು ಭಾರತಕ್ಕೆ ಸಿಗಬಹುದೆಂಬ ವಿಶ್ವಾಸವಿದೆ. ಅಲ್ಲದೆ ರ್‍ಯಾಂಕಿಂಗ್‌ನಲ್ಲಿಯೂ ಉನ್ನತ ಸಾಧನೆ ಭಾರತದ್ದಾಗಬಹುದು ಎಂದವರು ಇದೇ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು