Categories: ಉಡುಪಿ

ಪಠ್ಯಪುಸ್ತಕದ ವಿಚಾರದಲ್ಲಿ ಕಾಂಗ್ರೆಸ್ ಸರಕಾರ ರಾಜಕಾರಣ ಮಾಡುತ್ತಿದೆ- ಮಾಜಿ ಸಚಿವ ಕೋಟ ಕಿಡಿ

ಉಡುಪಿ: ಎಲ್ಲವನ್ನು ಅರ್ಥ ಮಾಡಿಕೊಳ್ಳಬೇಕಾದ ಸರ್ಕಾರ ದ್ವೇಷ ಸಾಧನೆಗೆ ಮುಂದಾಗಿದೆ. ಪಠ್ಯಪುಸ್ತಕದ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದರು.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಯಾವಾಗಲೂ ವ್ಯಕ್ತಿಗಳ ಆಧಾರದಲ್ಲಿ ನಡೆಯುವುದಿಲ್ಲ. ಸರ್ಕಾರ ನಡೆಯುವುದು ಶಾಸನದ ಆಧಾರದಲ್ಲಿ. ಒಂದು ಸರ್ಕಾರ ಮಾಡಿದ ನಿರ್ಧಾರವನ್ನು ಮತ್ತೊಂದು ಸರಕಾರ ಪರಿಶೀಲನೆ ಮಾಡದೆ ಬದಲು ಮಾಡುವುದು ಸರಿಯಲ್ಲ. ಸಾರ್ವಜನಿಕವಾಗಿ ಇಂತಹ ಬೆಳವಣಿಗೆಗಳು ಗೌರವ ತರುವುದಿಲ್ಲ ಎಂದು‌ ವಾಗ್ದಾಳಿ ನಡೆಸಿದರು.

ಬನ್ನಂಜೆ ಗೋವಿಂದಾಚಾರ್ಯರ ಪಾಠವನ್ನು ವಾಪಸ್ಸು ಪಡುತ್ತೇವೆ ಎನ್ನುವುದು ಖಂಡನಾರ್ಹ. 2009ರಲ್ಲಿ ಯುಪಿಎ ಸರ್ಕಾರ ಇದೇ ಬನ್ನಂಜೆ ಅವರಿಗೆ ಪದ್ಮಶ್ರೀ ನೀಡಿತ್ತು. ರಾಷ್ಟ್ರೀಯತೆ ವಿಚಾರಕ್ಕೆ ಸಂಬಂಧಪಟ್ಟಂತೆ ನೆಹರು ಅವರಿಂದಲೂ ಸ್ಪಂದನೆಯಿತ್ತು. ಆರ್ ಎಸ್ ಎಸ್ ಗೆ ಪಥಸಂಚಲನದಲ್ಲಿ ಅವಕಾಶ ಕೊಟ್ಟಿದ್ದರು. ಹೆಡ್ಗೇವಾರ್ ಪಾಠವನ್ನು ಕಾಂಗ್ರೆಸ್ ಸರಕಾರ ವಾಪಸ್ಸು ಪಡೆಯುವುದಾಗಿ ಹೇಳುತ್ತೆ. ಆರ್ ಎಸ್ ಎಸ್ ಸರಸಂಘ ಚಾಲಕರ ರಾಷ್ಟ್ರಭಕ್ತಿ ವಿಚಾರದ ಭಾಷಣವನ್ನು ವಾಪಸ್ ಪಡೆಯುತ್ತೇವೆ ಎನ್ನುತ್ತಾರೆ.

ಭಾರತದ ರಾಷ್ಟ್ರ ಪುತ್ರರು ಎಂಬ ಸೂಲಿಬೆಲೆ ಅವರ ಪಾಠವನ್ನು ವಾಪಾಸ್ ಪಡೆಯುತ್ತಾರೆ. ಸರಕಾರ ವೈಚಾರಿಕ ವಿಚಾರದ ಮೇಲೆ ದ್ವೇಷ ಪೂರ್ಣವಾದ ರಾಜಕೀಯ ಮಾಡುತ್ತಿದೆ. ಸರಕಾರ ಜನಾಭಿಪ್ರಾಯವನ್ನು ಗೌರವಿಸಬೇಕು. ಎಲ್ಲ ಬೆಳವಣಿಗೆಗಳನ್ನು ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸದನದ ಒಳಗೆ ಮತ್ತು ಹೊರಗೆ ಮನವರಿಕೆಗೆ ಪ್ರಯತ್ನಿಸುತ್ತೇವೆ. ಸರಕಾರ ಸ್ಪಂದಿಸದಿದ್ದರೆ ಸಿದ್ದರಾಮಯ್ಯ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

Ashika S

Recent Posts

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

7 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

22 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago