News Karnataka Kannada
Sunday, April 28 2024
ಉಡುಪಿ

ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ

Congress wins Alavoor grama panchayat president's post
Photo Credit : News Kannada

ಅಲೆವೂರು: ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಯತೀಶ್ ಕುಮಾರ್ ಅಲೆವೂರು ಮತ್ತು ಉಪಾಧ್ಯಕ್ಷರಾಗಿ ಅಮೃತಾ ಪೂಜಾರಿ ಆಯ್ಕೆಯಾಗಿದ್ದಾರೆ.

ಅಲೆವೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿ ಚುನಾವಣೆ ನಡೆಯಿತು. ಬಹು ಜಿದ್ದಾಜಿದ್ದಿನ ಕ್ಷೇತ್ರವಾದ ಅಲೆವೂರು ಪಂಚಾಯತ್ ಮತ್ತೊಮ್ಮೆ ಕೈಪಾಲಗಿದ್ದು, ವಿರೋಧ ಪಕ್ಷವಾದ ಬಿಜೆಪಿ ಬೆಂಬಲಿತ ಸದಸ್ಯರಿಗೆ ಭಾರೀ ಮುಖಭಂಗವಾಗಿದೆ.

ಪಂಚಾಯತ್ ನಲ್ಲಿ 15 ಕಾಂಗ್ರೆಸ್ ಬೆಂಬಲಿತ ಸದಸ್ಯರು ಹಾಗೂ 14 ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ‌. ಆದರೆ ಕಳೆದ ಬಾರಿಯಂತೆ ಈ ಬಾರಿಯೂ ಬಿಜೆಪಿ ಬೆಂಬಲಿತ ಸದಸ್ಯರೊಬ್ಬರ ಅಡ್ಡಮತದಾನದಿಂದಾಗಿ ಕಾಂಗ್ರೆಸ್‌ನ ಅಭ್ಯರ್ಥಿ ಯತೀಶ್ ಕುಮಾರ್ 16 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರು. ಬಿಜೆಪಿ ಬೆಂಬಲಿತ ಸದಸ್ಯ ಕೊರಂಗ್ರಪಾಡಿಯ ಶಂಕರ್ ಪಾಲನ್ 13 ಮತ ಪಡೆದು ಸೋಲನ್ನು ಅನುಭವಿಸಿದರು.

ಕಾಂಗ್ರೆಸ್ ಬೆಂಬಲಿತ ಅಮೃತಾ ಪೂಜಾರಿ 15 ಮತ ಪಡೆದರೆ, ಬಿಜೆಪಿ ಬೆಂಬಲಿತ ರೇಣುಕಾ ಶೆಟ್ಟಿ 14 ಮತ ಪಡೆದು ಪರಾಭವಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು