News Karnataka Kannada
Wednesday, April 24 2024
Cricket
ಉಡುಪಿ

ಕಾಂಗ್ರೆೆಸ್ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ:  ಧರ್ಮೇಂದ್ರ ಆರೋಪ

Dharmendra accuses Congress government of playing politics of hate
Photo Credit : News Kannada

ಉಡುಪಿ: ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸಿದಾಗ ಆತಂಕವಾಗುತ್ತಿದ್ದು, ಕಾಂಗ್ರೆೆಸ್ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು‌ ಅಭಿನವ ಭಾರತ್‌ ನ ರಾಜ್ಯ ಸಭಾಚಾಲಕ ಧರ್ಮೇಂದ್ರ ತಿಳಿಸಿದರು.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆೆ ಕಠಿಣ ಮತಾಂತರ ಕಾಯ್ದೆ, ಜನಸಂಖ್ಯಾ ನಿಯಂತ್ರಣ ಕಾಯ್ದೆಯ ಅಗತ್ಯವಿದೆ. ಆದರೆ ಇದನ್ನು ಯಾರು ಈಡೇರಿಸುತ್ತಿಲ್ಲ. ಕಾಂಗ್ರೆೆಸ್ ತುಷ್ಠೀಕರಣದ ರಾಜಕಾರಣ ಮಾಡುತ್ತಿದ್ದರೆ, ಬಿಜೆಪಿ ನಕಲಿ ಹಿಂದುತ್ವದ ಮುಖವಾಡ ಧರಿಸಿಕೊಂಡಿದೆ ಎಂದು ಟೀಕಿಸಿದರು.

ಸರಕಾರ ಪಠ್ಯ ಪುಸ್ತಕದ ವಿಚಾರದಲ್ಲಿ ತೆಗೆದುಕೊಂಡ ನಿರ್ಧಾರದ ಬಗ್ಗೆೆ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಅಭಿನವ ಭಾರತ್‌ನ ಪ್ರಮುಖರಾದ ಜಯರಾಮ್ ಅಂಬೆಕಲ್ಲು, ಶೇಖರ ವಾಮಂಜೂರು, ಪ್ರತಾಪ್ ಬೈಂದೂರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು