Categories: ಉಡುಪಿ

ಆತ್ಮಾವಲೋಕನ, ಪಕ್ಷ ಸಂಘಟನೆ ಮೂಲಕ ಮುಂದಿನ ಚುನಾವಣೆಗಳಿಗೆ ಜಿಲ್ಲಾ ಬಿಜೆಪಿ ಸಜ್ಜು: ಕುಯಿಲಾಡಿ

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ರಾಜ್ಯದಲ್ಲೇ ಮೂಂಚೂಣಿ ಸ್ಥಾನವನ್ನು ಪಡೆದಿದೆ. ಈ ಭರ್ಜರಿ ವಿಜಯದ ಹಿನ್ನೆಲೆಯಲ್ಲಿ ಪ್ರತೀ ಮಂಡಲ ಮತ್ತು ಜಿಲ್ಲೆಯ 1,111 ಬೂತ್ ಗಳಲ್ಲಿ ಆತ್ಮಾವಲೋಕನ ಸಭೆಗಳನ್ನು ನಡೆಸುವ ಜೊತೆಗೆ  ಪಕ್ಷ ಸಂಘಟನೆ ಮೂಲಕ ಮುಂಬರಲಿರುವ ಲೋಕಸಭೆ, ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳಲ್ಲಿ ಭರ್ಜರಿ ಯಶಸ್ಸು ಸಾಧಿಸಲು ತಕ್ಷಣದಿಂದ ಕಾರ್ಯಪ್ರವೃತ್ತರಾಗಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾಂಗ್ರೆಸ್ ಉಚಿತಗಳ ಗ್ಯಾರಂಟಿ ಕಾರ್ಡ್ ಗಳ ಆಮಿಷ ತೋರಿಸಿ ಮೋಸದಿಂದ ವಿಧಾನಸಭಾ ಚುನಾವಣೆಯನ್ನು ಗೆದ್ದಿದೆ. ಅಧಿಕಾರಕ್ಕೆ ಬಂದ ಮೊದಲನೇ ಕ್ಯಾಬಿನೆಟ್ ಸಭೆಯಲ್ಲೇ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ ಎಂದಿರುವ ಕಾಂಗ್ರೆಸ್ ಮುಖಂಡರು ಮಾತು ತಪ್ಪಿದ್ದಾರೆ. ಉಚಿತ ಖಚಿತಗಳ ಗ್ಯಾರಂಟಿಗಳನ್ನು ತಕ್ಷಣ ಜಾರಿಗೊಳಿಸದೇ ಇದ್ದಲ್ಲಿ ಬಿಜೆಪಿ ಜನತೆಯ ಪರವಾಗಿ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದರು.

ಅಪಪ್ರಚಾರವೇ ಕಾಂಗ್ರೆಸ್ ಜೀವಾಳವಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಜಾಗೃತರಾಗಿ ಮಂಡಲ ಮತ್ತು ಬೂತ್ ಮಟ್ಟದ ಸಭೆಗಳಲ್ಲಿ ಕಾಂಗ್ರೆಸ್ಸಿನ ಗ್ಯಾರಂಟಿ ಕಾರ್ಡ್ ಗಳ ಮೋಸ ಜಾಲದ ಬಗ್ಗೆ ವಿಚಾರ ವಿನಿಮಯ ನಡೆಸುವ ಜೊತೆಗೆ ಜನತೆಯಲ್ಲಿ ಅರಿವು ಮೂಡಿಸುವುದು ಅತ್ಯಗತ್ಯ ಎಂದರು.

ಮೇ 30ರಂದು 4.00ಕ್ಕೆ ಬೈಂದೂರು, ಜೂನ್ 2ರಂದು 4.00ಕ್ಕೆ ಕುಂದಾಪುರ, ಜೂನ್ 3ರಂದು 10.30ಕ್ಕೆ ಕಾಪು, 4.00ಕ್ಕೆ ಕಾರ್ಕಳ ಮತ್ತು 5.30ಕ್ಕೆ ಉಡುಪಿ ನಗರ ಮತ್ತು ಗ್ರಾಮಾಂತರ ಮಂಡಲಗಳ ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು.

ಜಿಲ್ಲಾ, ಮೋರ್ಚಾ ಮತ್ತು ಮಂಡಲ ಪದಾಧಿಕಾರಿಗಳು ತಮ್ಮ ಅಭಿಪ್ರಾಯ, ಅನಿಸಿಕೆಗಳನ್ನು ಸಭೆಯಲ್ಲಿ ಹಂಚಿಕೊಂಡರು.

ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಕಿಶೋರ್ ಕುಮಾರ್ ಕುಂದಾಪುರ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಉಪಸ್ಥಿತರಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ವಂದಿಸಿದರು.

Sneha Gowda

Recent Posts

ಕೇಂದ್ರ ದಿಂದ ‘ಕರ್ನಾಟಕ’ಕ್ಕೆ 3,454 ಕೋಟಿ ರೂ. ಬರಪರಿಹಾರ ಘೋಷಣೆ

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಬರ…

16 seconds ago

ಬೆಳಗಾವಿ ಅಖಾಡಕ್ಕೆ ಏಕಕಾಲಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದು ಎಂಟ್ರಿ

ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಿತು. ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ…

27 mins ago

ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಎಂದ ಪ್ರಧಾನಿ

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ನಡೆದ ಮತದಾನ ಅದ್ಭುತವಾಗಿದ್ದು, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು…

34 mins ago

ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀ ರಾಮ್’ ಬರೆದ ವಿದ್ಯಾರ್ಥಿಗಳು ಪಾಸ್‌

ಉತ್ತರ ಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇದೀಗ ಈ…

42 mins ago

ಬರೋಬ್ಬರಿ 95 ಮಕ್ಕಳನ್ನು ಅಕ್ರಮವಾಗಿ ಸಾಗಾಟ !

95 ಮಕ್ಕಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆಯೊಂದು ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬಾಲ ಆಯೋಗ 95 ಮಕ್ಕಳನ್ನು…

1 hour ago

ಯೂಟ್ಯೂಬ್​ ಮೇಲೆ ಬಿತ್ತು ಎಲಾನ್​ ಮಸ್ಕ್​​ ಕಣ್ಣು

ಟೆಸ್ಲಾ ಒಡೆತನದ ಎಲಾನ್​ ಮಸ್ಕ್​ ಯೂಟ್ಯೂಬ್​ಗೆ ಟಕ್ಕರ್​ ಕೊಡಲು ತಯಾರಿ ನಡೆಸಿದೆ. ಅದಕ್ಕಾಗಿ ಎಕ್ಸ್​ ಟಿವಿ ಆ್ಯಪ್​ ಅನ್ನು ಪ್ರಾರಂಭಿಸಲು…

2 hours ago