News Karnataka Kannada
Friday, May 03 2024
ಉಡುಪಿ

ದೊಡ್ಡಣಗುಡ್ಡೆ:  ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ವಾಹನದ ಮೇಲೆ ಅಧಿಕಾರಿಗಳಿಂದ ದಾಳಿ

Officials raid man's vehicle for selling plastic to shop
Photo Credit : News Kannada

ದೊಡ್ಡಣಗುಡ್ಡೆ: ಉಡುಪಿ ನಗರಸಭಾ ವ್ಯಾಪ್ತಿಯ ದೊಡ್ಡಣಗುಡ್ಡೆ ಬಳಿ ಅಂಗಡಿಗಳಿಗೆ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಇಕ್ಬಾಲ್ ಎಂಬಾತನ ವಾಹನದ ಮೇಲೆ ಇಂದು ನಗರಸಭೆ ಆರೋಗ್ಯ ಶಾಖೆಯ ಅಧಿಕಾರಿಗಳು ದಾಳಿ ನಡೆಸಿ, 75ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 5 ಸಾವಿರ ರೂ. ದಂಡ ವಿಧಿಸಿದರು.

ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನೀಟರಿ ಸೂಪರ್‌ವೈಸರ್ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು. ಸಾರ್ವಜನಿಕರು, ಉದ್ದಿಮೆದಾರರು ಹಾಗೂ ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಿ, ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು