Categories: ಉಡುಪಿ

ಉಡುಪಿ: ಕೊರೊನಾ ಬಗ್ಗೆ ಭಯಬೇಡ, ಮುನ್ನೆಚ್ಚರಿಕೆ ಇರಲಿ- ಶೋಭಾ ಕರಂದ್ಲಾಜೆ

ಉಡುಪಿ: ಪ್ರಪಂಚದ ಬೇರೆ ಬೇರೆ ಭಾಗಗಳಲ್ಲಿ ಮತ್ತೊಮ್ಮೆ ಕೊರೊನಾ ಬಂದಿದೆ. ವರದಿಯ ಪ್ರಕಾರ ಚೀನಾದಲ್ಲಿ ಪ್ರತಿದಿನ ಐದರಿಂದ ಹತ್ತು ಸಾವಿರ ಜನ ಸಾಯುತ್ತಿದ್ದಾರೆ. ಅಲ್ಲಿ ವೈದ್ಯಕೀಯ ನೆರವು, ಆಹಾರ, ಔಷಧಿ ಸಿಗುತ್ತಿಲ್ಲ ಎಂದು ಮಾಹಿತಿ ಇದೆ. ಭಾರತಕ್ಕೂ ಚೀನಾದಿಂದ ಪ್ರವಾಸಿಗರು ಬರುತ್ತಿದ್ದು, ನಾಲೈದು ಮಂದಿಯಲ್ಲಿ ಈಗಾಗಲೇ ರೂಪಾಂತರಿ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನೇತೃತ್ವದಲ್ಲಿ ಹಲವು ಹಂತದ ಸಭೆ ಮಾಡಿದ್ದೇವೆ. ನಿಯಮ ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರ ಹೇಳಿದೆ. ದೇಶದಲ್ಲಿ ಆತಂಕ ಪಡುವ ವಿಚಾರ ಇಲ್ಲ. ಆದರೆ, ಜನರು ಜಾಗೃತರಾಗಿರಬೇಕು. ಮಾಸ್ಕ್ ಧರಿಸಬೇಕು. ಎಲ್ಲ ಭಾರತೀಯರಿಗೂ ಉಚಿತ ವ್ಯಾಕ್ಸಿನ್ ಕೊಡುವ ಕೆಲಸ ಕೇಂದ್ರ ಸರ್ಕಾರ ಮಾಡಿತ್ತು. ಈಗ ಎಲ್ಲರೂ ಬೂಸ್ಟರ್ ಡೋಸ್ ತೆಗೆದುಕೊಳ್ಳಬೇಕು. ನಮ್ಮ ಮಕ್ಕಳ ಬಗ್ಗೆ ನಾವು ಜಾಗೃತಿ ವಹಿಸಬೇಕು. ನಮ್ಮ ದೇಶದಲ್ಲಿ ಕೊಟ್ಟ ವ್ಯಾಕ್ಸಿನ್ ಎಲ್ಲಾ ವೈರಸ್‌ನ್ನು ತಡೆಗಟ್ಟುವ ವಿಶ್ವಾಸವಿದೆ ಎಂದು ಹೇಳಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಭಾರತ್ ಜೋಡೋ ಯಾತ್ರೆ ಕೇರಳದಿಂದ ಆರಂಭವಾಗಿ ತಿಂಗಳುಗಟ್ಟಲೆ ಕಳೆದಿವೆ. ಯಾತ್ರೆ ತಡೆಗಟ್ಟುವ ಕೆಲಸ ಯಾರೂ ಮಾಡಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಕೂಡ ಕಾಂಗ್ರೆಸಿಗೆ ಎಲ್ಲಾ ರೀತಿಯ ರಕ್ಷಣೆ ನೀಡಲಾಗಿತ್ತು. ದಸರಾ ಸಂದರ್ಭದಲ್ಲಿ ಮೈಸೂರಿಗೆ ಯಾತ್ರೆ ಬಂದರೂ ಯಾವುದೇ ಅಡ್ಡಿಯಾಗಲಿಲ್ಲ. ಜೋಡೋ ಯಾತ್ರೆಯಿಂದ ಕಾಂಗ್ರೆಸ್ ಇಮೇಜ್ ಎಷ್ಟು ಬದಲಾಗಿದೆ ಎಂಬ ಬಗ್ಗೆ ರಾಹುಲ್ ಗಾಂಧಿಗೆ ಸಂಶಯವಿದೆ. ಇದರಿಂದ ಅವರು ಆತಂಕಕ್ಕೀಡಾಗಿದ್ದಾರೆ ಎಂದು ಲೇವಡಿ ಮಾಡಿದರು.

Sneha Gowda

Recent Posts

ಮುದ್ದಾದ ಮಗುವಿನ ತಾಯಿಯಾದ ಯಾಮಿ ಗೌತಮ್; ಕಂದನಿಗೆ ಇಟ್ಟ ಹೆಸರೇನು ಗೊತ್ತಾ?

ಸ್ಯಾಂಡಲ್​ವುಡ್​ ನಟ ಗಣೇಶ್​​ ಅಭಿನಯದ ಉಲ್ಲಾಸ ಉತ್ಸಾಹ ನಟಿ ಯಾಮಿ ಗೌತಮ್​​ ಅವರು ಮೇ 10 ರಂದು ಗಂಡು ಮಗುವಿಗೆ…

13 mins ago

ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…

1 hour ago

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

1 hour ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

1 hour ago

ಹೆಸ್ಕಾಂ ಲೈನ್ ಮೆನ್ ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…

1 hour ago

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆ

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…

2 hours ago