Categories: ಉಡುಪಿ

ಕೊರಗರಿಗೆ ಮಂಜೂರಾದ ಜಾಗದ ಅತಿಕ್ರಮಣ: ಸೂಕ್ತ ನ್ಯಾಯ ಒದಗಿಸುವಂತೆ ಕೊರಗ ಕುಟುಂಬಗಳ ಆಗ್ರಹ

ಬ್ರಹ್ಮಾವರ: ತಾಲೂಕಿನ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಾಡಿ ಗ್ರಾಮದಲ್ಲಿ ಕೊರಗರಿಗೆ ಮಂಜೂರಾತಿ ಆದ ಜಾಗವನ್ನು ವ್ಯಕ್ತಿಯೋರ್ವರು ಕಬಳಿಸಿರುವುದಾಗಿ ಅಲ್ಲಿನ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ನೊಂದ ಕೊರಗ ನಿವಾಸಿಗಳು, ಬ್ರಹ್ಮಾವರ ತಾಲೂಕಿನ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಾಡಿ ಗ್ರಾಮದ ಮಾನಂಬಳ್ಳಿ ಎಂಬಲ್ಲಿ 10 ಕೊರಗ ಕುಟುಂಬಗಳಿಗೆ ತಲಾ ಒಂದು ಎಕ್ರೆಯಂತೆ ಭೂಮಿ ಮಂಜೂರಾಗಿದ್ದು ಆ ಭೂಮಿಯಲ್ಲಿ ಪುನರ್ವಸತಿ ಸಂಬಂಧಿಸಿದ ಕುಡಿಯುವ ನೀರು, ರಸ್ತೆ, ವಿದ್ಯುತ್ ಕಾರ್ಯದ ಅಭಿವೃದ್ದಿ ಕೆಲಸಗಳು ಐ.ಟಿ.ಡಿಪಿ ಇಲಾಖೆಯ ಮೂಲಕ ಆಗಿರುತ್ತದೆ.

ಈಗ ಸದ್ಯ ಆ ಸ್ಥಳದಲ್ಲಿ 15 ಕುಟುಂಬಗಳು ವಾಸವಾಗಿದ್ದೇವೆ. ಅಲ್ಲಿನ ವ್ಯಕ್ತಿಯೋರ್ವರು ಗುಂಪಿಗೆ ಮಂಜೂರಾದ ನೀರಾವರಿ ಬಾವಿಯನ್ನು ಅತಿಕ್ರಮಿಸಿದ್ದು , ಸ್ಥಳೀಯರು ತಿರುಗಾಡುವ ರಸ್ತೆಗೆ ಬೇಲಿ ಹಾಕಿದ್ದಾರೆ. ಇದರಿಂದ ಇಲ್ಲಿನ ಕೊರಗ ಕುಟುಂಬದವರಿಗೆ ಸಮಸ್ಯೆ ಆಗಿದ್ದು, ಆದಷ್ಟು ಬೇಗ ಅತಿಕ್ರಮಣ ತೆರವು ಮಾಡಬೇಕೆಂದು ಅವರು ಆಗ್ರಹಿಸಿದರು.

Gayathri SG

Recent Posts

ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಬಂಡಾಯ ಶಮನ: ವಿಜಯೇಂದ್ರ ಮಾತಕತೆ ಸಕ್ಸಸ್

ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…

6 mins ago

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

18 mins ago

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

55 mins ago

ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್‌ ವಶಕ್ಕೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…

58 mins ago

5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…

1 hour ago

ರಾಹುಲ್, ಅಖಿಲೇಶ್ ಯಾದವ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಾಲ್ತುಳಿತ

 ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…

1 hour ago