ಉಡುಪಿ: ಇಂದ್ರಾಳಿ ರೈಲ್ವೆ ಗೋಡೌನ್ ನ ಹಿಂಬದಿಯಲ್ಲಿ ದಾಸ್ತಾನು ಇರಿಸಲಾಗಿದ್ದ ಲಕ್ಷಾಂತರ ಮೌಲ್ಯದ ರೈಲ್ವೆ ಹಳಿಗೆ ಬಳಸುವ ರಬ್ಬರ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಘಟನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ರಬ್ಬರ್ ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.
ರಬ್ಬರ್ ಗೆ ಬೆಂಕಿಬಿದ್ದ ಪರಿಣಾಮ ಇಂದ್ರಾಳಿ ಪರಿಸರದಲ್ಲಿ ದಟ್ಟ ಹೊಗೆ ಆವರಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರಲು ಹರಸಾಹಸಪಟ್ಟರು. ಎರಡು ಅಗ್ನಿಶಾಮಕ ವಾಹನ ಹಾಗೂ ಹತ್ತಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…