News Karnataka Kannada
Sunday, May 12 2024
ಉಡುಪಿ

ಗಾಂಜಾ ಸೇವನೆ: ಮಣಿಪಾಲದಲ್ಲಿ ಐವರು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

Five students detained in Manipal for consuming ganja
Photo Credit : News Kannada

ಮಣಿಪಾಲ: ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಘಟನೆ ಮಣಿಪಾಲ ಮಾಂಡವಿ ಎಮರಾಲ್ಡ್ ಅಪಾರ್ಟ್ಮೆಂಟ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ನಡೆದಿದೆ.

ವಶಕ್ಕೆ ಪಡೆದ ವಿದ್ಯಾರ್ಥಿಗಳನ್ನು 22ವರ್ಷದ ನಿಖಿಲ್ ಎಮ್, 25ವರ್ಷದ ತನ್ವೀರ್ ರೆಡ್ಡಿ, 22ವರ್ಷದ ಶರಣ್ ಶೆಟ್ಟಿ , 21ವರ್ಷದ ರಾಹುಲ್ ಸೀಮಾ, 21ವರ್ಷದ ತುಶಾರ್ ಜಿ ಎಂದು ಗುರುತಿಸಲಾಗಿದೆ. ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ನವೀನ್ ನಾಯ್ಕ ಅವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ವಿದ್ಯಾರ್ಥಿಗಳು ಗಾಂಜಾ ಸೇವಿಸಿದಂತೆ ಕಂಡುಬಂದಿದ್ದು, ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಮಾ.22ರಂದು‌ ಪೊಲೀಸರ ಕೈ ಸೇರಿದ ವರದಿಯಲ್ಲಿ ಐದು ವಿದ್ಯಾರ್ಥಿಗಳು ಗಾಂಜಾ ಸೇವಿಸಿರುವುದು ಧೃಡಪಟ್ಟಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು