ಉಡುಪಿ: ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಸ್ ಈಶ್ವರಪ್ಪ ಅವರು ಇಂದು ಉಡುಪಿ ಜಿಲ್ಲೆಯ ಬೈಂದೂರಿನ ಉಪ್ಪಂದದಲ್ಲಿ ಸಮಾವೇಶ ನಡೆಸಿದರು.
ಸಮಾವೇಶದಲ್ಲಿ ಕಾರ್ಯಕರ್ತರಿಗಾಗಿ ಬಿರಿಯಾನಿ ಕೂಡ ಸಿದ್ಧಪಡಿಸಲಾಗುತ್ತಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಫ್ಲೈಯಿಂಗ್ ಸ್ಕ್ವಾಡ್ ಸಮಾವೇಶದ ಮೇಲೆ ದಾಳಿ ನಡೆಸಿ ಬಿರಿಯಾನಿ ಹಂಚದಂತೆ ಎಚ್ಚರಿಕೆ ನೀಡಿದೆ.
ಈಶ್ವರಪ್ಪ ಸಮಾವೇಶದಲ್ಲಿ ಒಂದು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಿದ್ದರು. ಕಾರ್ಯಕರ್ತರಿಗೆ ಮಧ್ಯಾಹ್ನದ ಊಟಕ್ಕೆಂದು ಬಿರಿಯಾನಿ ಕೂಡ ಸಿದ್ಧಪಡಿಸಲಾಗಿತ್ತು.
ಸಮಾವೇಶ ನಡೆಯುತ್ತಿದ್ದ ಸಭಾಂಗಣಕ್ಕೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ ನಡೆಸಿದ್ದು, ಬಿರಿಯಾನಿ ಸಪ್ಲೈ ಮಾಡಿದರೆ ಚುನಾವಣೆ ವೆಚ್ಚಕ್ಕೆ ಸೇರ್ಪಡೆಗೊಳಿಸುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಹೀಗಾಗಿ ತಯಾರಿಸುತ್ತಿದ್ದ ಬಿರಿಯಾನಿ ಅಲ್ಲೇ ಬಾಕಿಯಾಗಿದ್ದು, ಬಿರಿಯಾನಿಗಾಗಿ ಕಾದು ಸುಸ್ತಾದ ಕಾರ್ಯಕರ್ತರು, ಬಿರಿಯಾನಿ ತಿನ್ನದೇ ವಾಪಸಾದರು.