News Karnataka Kannada
Friday, May 03 2024
ಉಡುಪಿ

ಗಂಗೊಳ್ಳಿ ಬೋಟ್ ಅಗ್ನಿ ಅವಘಡ: 1.75 ಕೋಟಿ ಪರಿಹಾರ ಮಂಜೂರು- ಯಶ್ ಪಾಲ್ ಸುವರ್ಣ

ಕೇಂದ್ರ ಸರಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಭಾರತ್ ಅಕ್ಕಿ ಮಾರಾಟಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಫೆಬ್ರವರಿ 28 ಬುಧವಾರದಂದು ಬೆಳಿಗ್ಗೆ 9.30ಕ್ಕೆ ಆದಿಉಡುಪಿ ಸಂತೆ ಮಾರ್ಕೆಟ್ ಬಳಿ ಚಾಲನೆ ನೀಡಲಿದ್ದಾರೆ.
Photo Credit : News Kannada

ಉಡುಪಿ: 2023 ನವೆಂಬರ್ ತಿಂಗಳಿನಲ್ಲಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಬೋಟ್ ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸಿದ ಬೋಟ್ ಮಾಲೀಕರಿಗೆ ರಾಜ್ಯ ಸರ್ಕಾರ 1.75 ಕೋಟಿ ಹಾಗೂ ಶಿರೂರಿನಲ್ಲಿ ಪ್ರವಾಹದಿಂದ ಹಾನಿಗೀಡಾದ ನಾಡದೋಣಿಗಳಿಗೆ ರೂ. 28 ಲಕ್ಷ ಪರಿಹಾರವನ್ನು ಮೀನುಗಾರರ ಸಂಕಷ್ಟ ಪರಿಹಾರನಿಧಿಯ ಮೂಲಕ ಮಂಜೂರು ಮಾಡಿರುವುದಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಮೀನುಗಾರಿಕೆ ಸಚಿವ ಮಾಂಕಾಳ ಎಸ್. ವೈದ್ಯರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಮೀನುಗಾರರ ಸಂಕಷ್ಟ ಪರಿಹಾರನಿಧಿ ಸಮಿತಿಯ ಸಭೆಯಲ್ಲಿ ಪ್ರಕರಣದಿಂದ ಸಮಸ್ಯೆಗೀಡಾದ ಮೀನುಗಾರರಿಗೆ ಸೂಕ್ತ ಪರಿಹಾರ ನಿಟ್ಟಿನಲ್ಲಿ ಚರ್ಚಿಸಿ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಯಿತು.

ಗಂಗೊಳ್ಳಿ ಬೋಟ್ ಅಗ್ನಿ ಅವಘಡದಿಂದ ಬೋಟ್ ಮಾಲೀಕರು ಆರ್ಥಿಕವಾಗಿ ದೊಡ್ಡ ನಷ್ಟವನ್ನು ಎದುರಿಸಿ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಈ ಘಟನೆಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ ಮುಖ್ಯಮಂತ್ರಿಗಳ ಪರಿಹಾರನಿಧಿಯ ಮೂಲಕ ಗರಿಷ್ಠ ಪರಿಹಾರ ಒದಗಿಸುವಂತೆ ಸಭೆಯಲ್ಲಿ ಸಚಿವರಿಗೆ ಸಮಿತಿಯ ಸದಸ್ಯರಾದ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದರು.

ಕರಾವಳಿ ಜಿಲ್ಲೆಯ ಸಮಸ್ತ ಮೀನುಗಾರರ ಮನವಿಯನ್ನು ಪರಿಗಣಿಸಿ ಪರಿಹಾರ ಮಂಜೂರಾತಿಗೆ ವಿಶೇಷ ಮುತುವರ್ಜಿವಹಿಸಿದ ಮೀನುಗಾರಿಕಾ ಸಚಿವ ಮಾಂಕಾಳ ಎಸ್. ವೈದ್ಯ, ಗರಿಷ್ಠ ಪರಿಹಾರಕ್ಕೆ ಸರಕಾರವನ್ನು ಆಗ್ರಹಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹಾಗೂ ಎಲ್ಲಾ ಜನಪ್ರತಿನಿಧಿಗಳಿಗೆ ಮೀನುಗಾರರ ಪರವಾಗಿ ಕೃತಜ್ಞತೆ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು