Categories: ಉಡುಪಿ

ಸರ್ಕಾರ ವೆಚ್ಚ ಭರಿಸಿದ್ರೆ ಖಾಸಗಿ ಬಸ್ ನಲ್ಲೂ ಉಚಿತ ಪ್ರಯಾಣ ಗ್ಯಾರಂಟಿ ಕೊಡ್ತಿವಿ – ಕುಯಿಲಾಡಿ

ಉಡುಪಿ: ರಾಜ್ಯದಾದ್ಯಂತ ಸರಕಾರಿ ಬಸ್ ಗಳಲ್ಲಿ ಮಹಿಳೆರಿಗೆ ಉಚಿತ ಪ್ರಯಾಣ ಎಂದು ಸರಕಾರ ಘೋಷಿಸಿದೆ. ಆದ್ರೆ 17 ಜಿಲ್ಲೆಗಳಲ್ಲಿ ಖಾಸಗಿ ಬಸ್ ಗಳು ಓಡಾಟ ಮಾಡುತ್ತಿವೆ. ಈ ಜಿಲ್ಲೆಗಳಲ್ಲಿ ಮಹಿಳೆಯರಿಗೆ ಅನ್ಯಾಯ ಆಗೋದು ಗ್ಯಾರಂಟಿ.ಆದ್ದರಿಂದ ಸರಕಾರ ಖಾಸಗೀ ಬಸ್ ಗಳ ವೆಚ್ಚ ಭರಿಸಿದ್ರೆ ಖಾಸಗಿ ಬಸ್ ನಲ್ಲೂ ಉಚಿತ ಪ್ರಯಾಣದ ಗ್ಯಾರಂಟಿ ಪಡೆಯಬಹುದು ಎಂದು ಸಿಟಿಬಸ್ ಮಾಲೀಕರ ಸಂಘ ತಿಳಿಸಿದೆ.

ರಾಜ್ಯದಾದ್ಯಂತ ಕಾಂಗ್ರೆಸ್ ನ ಗ್ಯಾರಂಟಿಗಳು ಒಂದೊಂದೆ ಜಾರಿ ಆಗುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ. ಸಾರಿಗೆ ಸಚಿವ ರಾಮಲಿಂಗರೆಡ್ಡಿ ರಾಜ್ಯದಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಣೆ ಮಾಡಿದ್ದರು. ಆದ್ರೆ ರಾಜ್ಯದಲ್ಲಿ ಸರಕಾರಿ ಬಸ್ ಮಾತ್ರ ಅಲ್ಲ, ಖಾಸಗೀ ಬಸ್ ಗಳು ಸಹ ಓಡಾಟ ಮಾಡುತ್ತಿದೆ. ಇಲ್ಲಿ ಮಹಿಳೆಯರಿಗೆ ಸಮಸ್ಯ್ ಅಗುವ ಸಾದ್ಯತೆ ಇದೆ. ರಾಜ್ಯದಾದ್ಯಂತ 17 ಜಿಲ್ಲೆಯಲ್ಲಿ ಖಾಸಗೀ ಬಸ್ ಓಡಾಟ ನಡೆಸುತ್ತಿದ್ದು ಸರಕಾರ ಇಲ್ಲಿ ಸಹ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಆಗ್ರಹ ಮಾಡಿದ್ದರು. ಇದೀಗ ಸಿಟಿ ಬಸ್ ಮಾಲೀಕರ ಒಕ್ಕೂಟ ನಿರ್ಣಯ ಮಾಡಿದೆ.

ಈ ಬಗ್ಗೆ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಒಕ್ಕೂಟದ ಅದ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ , ಖಾಸಗೀ ಬಸ್ ಗಳಲ್ಲಿ ಉಚಿತ ಪ್ರಯಾಣ ನೀಡಲು ಸಾಧ್ಯವಿದೆ. ಆದ್ರೆ ಸರಕಾರ ಸರಕಾರಿ ಬಸ್ ಗಳ ವೆಚ್ಚ ಭರಿಸಿದಂತೆ, ಖಾಸಗೀ ಬಸ್ ಗಳ ವೆಚ್ಚ ಸಹ ಭರಿಸಬೇಕು . ಇಲ್ಲವಾದ್ರೆ ಡೀಸೆಲ್ ಸಬ್ಸಿಡಿ, ಬಸ್ ಪಾಸ್ ಅಥವಾ ಇತರ ಮೂಲಗಳಿಂದ ವೆಚ್ಚ ಭರಿಸಿದ್ರೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣ ಸಾಧ್ಯವಿದ್ದು, ಈ ಬಗ್ಗೆ ಸರಕಾರ ಗಮನ ಹರಿಸಬೇಕು. ಕರಾವಳಿಯಲ್ಲಿ ಹೆಚ್ಚು ಮಂದಿ ಖಾಸಗೀ ಬಸ್ ಗಳಲ್ಲಿ ಸಂಚಾರ ಮಾಡುತ್ತಿದ್ದಾರೆ ಎಂದರು.

Gayathri SG

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

4 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

4 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

5 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

5 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

5 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

6 hours ago