Categories: ಉಡುಪಿ

ಗ್ರಾಮ ಪಂಚಾಯತ್ ಸದಸ್ಯರು,ಮುಖಂಡರುಗಳು ವಾರ್ಡಿನ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು

ಕುಂದಾಪುರ: ಬಿಜೆಪಿ ಪಕ್ಷದ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಮುಖಂಡರುಗಳು ವಾರ್ಡಿನ ಜವಾಬ್ದಾರಿಯನ್ನು ಪಡೆದುಕೊಂಡು ಮತದಾರರ ಮನೆ ಮನೆಗೆ ಭೇಟಿ ನೀಡಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೊಜನೆಗಳ ಬಗ್ಗೆ ಮಾಹಿತಿಯನ್ನು ನೀಡುವಂತ ಕೆಲಸ ಮಾಡಬೇಕು.ಪ್ರತಿ ಮಹಾಶಕ್ತಿ ಕೇಂದ್ರಗಳಲ್ಲಿ ಸಭೆಗಳನ್ನು ನಡೆಸಿ ಚುನಾವಣಾ ರಂಗಕ್ಕೆ ಶಕ್ತಿಯನ್ನು ತುಂಬಬೇಕು.ನಮ್ಮೆಲ್ಲರ ಒಗ್ಗಟ್ಟಿನ ಹೋರಾಟದಿಂದ ಅಪೂರ್ವ ವ್ಯಕ್ತಿತ್ವವನ್ನು ಹೊಂದಿರುವ ಸಮಾನ್ಯ ಕಾರ್ಯಕರ್ತ ಗುರುರಾಜ್ ಗಂಟಿಹೊಳೆ ಗೆಲುವನ್ನು ಕಾಣುವಂತೆ ಆಗಬೇಕೆಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬೈಂದೂರು ಬಿಜೆಪಿ ಮಂಡಲದ ವತಿಯಿಂದ ಕೊಂಕಣ ಖಾರ್ವಿ ಸಭಾಂಗಣದಲ್ಲಿ ಸೋಮವಾರ ನಡೆದ ಬೈಂದೂರು ವಿಧಾನಸಭೆ ಕ್ಷೇತ್ರದ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಸಭೆಯಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಪ್ರತಿ ಮನೆ ಮನೆಗೆ ಶುದ್ಧ ಕುಡಿಯುವ ನೀರು,ಗೋವುಗಳ ಆರೈಕೆಗೆ ಗೋಶಾಲೆ ನಿಮಾಣ,ಆರೋಗ್ಯ,ಕೃಷಿ,ಶಿಕ್ಷಣ,ಉದ್ಯೋಗ ಭರವಸೆ ಯೋಜನೆ,ಪ್ರವಾಸೋದ್ಯಮ,ಮೀನುಗಾರಿಕೆ ಸೇರಿದಂತೆ ಒಟ್ಟು 8 ರೀತಿಯ ವಿಶೇಷ ಯೋಜನೆಗಳನ್ನು ಬೈಂದೂರು ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಣಾಳಿಕೆಯನ್ನು ಸಿದ್ದಪಡಿಸಲಾಗಿದೆ ಡಬಲ್ ಇಂಜಿನ್ ಸರಕಾರ ಬೈಂದೂರು ಕ್ಷೇತ್ರವನ್ನು ಸರ್ವಾಂಗೀಣವಾಗಿ ಅಭಿವೃದ್ಧಿಗೊಳಿಸಲಿದೆ ಎಂದರು.

ಪಂಚಾಯತ್ ವ್ಯವಸ್ಥೆಗೆ 15ನೇ ಹಣಕಾಸು ಯೋಜನೆಯ ಮೂಲಕ ವಿಶೇಷ ಅನುದಾನವನ್ನು ನೀಡಿ ಡಬಲ್ ಇಂಜಿನ್ ಸರಕಾರ ಮಹತ್ತರವಾದ ಕೆಲಸವನ್ನು ಮಾಡಿದೆ.ಬಿಜೆಪಿ ಸರಕಾರದ ಅವಧಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯರ ಗೌರವಧನವನ್ನು ಹೆಚ್ಚಿಸುವ ಕ್ರಮವನ್ನು ಕೈಗೊಳ್ಳಲಾಗಿದೆ ಎಂದರು.ಸುಳ್ಳು ಭರವಸೆಗಳಿಂದ ಕೂಡಿದ ಕಾಂಗ್ರೆಸ್ ಪ್ರಣಾಳಿಕೆಯನ್ನು ಯಾವುದೇ ಕಾರಣಕ್ಕೂ ಈಡೇರಿಕೆ ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಮಾತನಾಡಿ ಪಕ್ಷ ಧೈರ್ಯ ನೀಡಿದ್ದರಿಂದ ಮೊದಲ ಬಾರಿಗೆ ಚುನಾವಣೆಯನ್ನು ಎದುರಿಸುತ್ತಾ ಇದ್ದೇನೆ.ಸಾಮಾನ್ಯ ಕಾರ್ಯಕರ್ತನಿಗೆ ಸಮಾಜ ಸೇವೆ ಮಾಡಲು ಒಂದು ಅವಕಾಶ ನೀಡಬೇಕು.ಜನರ ಕಷ್ಟ,ಸುಖಕ್ಕೆ ಸ್ಪಂದಿಸುವ ಕೆಲಸ ಸದಾ ಮಾಡಲಾಗುವುದು ಎಂದರು.

ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ರಾಜ್ಯ ಓಬಿಸಿ ಮೋರ್ಚಾದ ಕಾರ್ಯದರ್ಶಿ ಡಾ.ಗೋವಿಂದ ಬಾಬು ಪೂಜಾರಿ,ಬ್ರಿಜೇಸ್ ಚೌಟ,ಪ್ರಿಯದರ್ಶಿನಿ ದೇವಾಡಿಗ,ಆನಂದ ಖಾರ್ವಿ,ಪ್ರಣಾಳಿಕೆ ಸಮಿತಿ ಅಧ್ಯಕ್ಷ ಚಿಟ್ಟೆ ರಾಜಗೋಪಾಲ ಹೆಗ್ಡೆ ಉಪಸ್ಥಿತರಿದ್ದರು.

Ashika S

Recent Posts

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

3 hours ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

3 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

4 hours ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

4 hours ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

4 hours ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

4 hours ago