News Karnataka Kannada
Sunday, May 05 2024
ಉಡುಪಿ

ಗುಜ್ಜಾಡಿ: ಮರದ ಕೊಂಬೆ ಕಡಿಯುತ್ತಿದ್ದ ವೇಳೆ ವಿದ್ಯುತ್ ತಗುಲಿ ಯುವಕ ಸಾವು

Man dies of electrocution while cutting tree branch
Photo Credit : News Kannada

ಗುಜ್ಜಾಡಿ: ಮರಕ್ಕೆ ಹತ್ತಿ ಕೊಂಬೆ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ನಾಯಕವಾಡಿ ಚೆಕ್‌ಪೋಸ್ಟ್‌ಬಳಿ ನ.23ರಂದು 1.40ಕ್ಕೆ ನಡೆದಿದೆ.

ಮೃತರನ್ನು ಗುಜ್ಜಾಡಿ ಗ್ರಾಮದ ನಾಯಕವಾಡಿ ನಿವಾಸಿ 20ವರ್ಷದ ಸುಜಯ್ ಎಂದು ಗುರುತಿಸಲಾಗಿದೆ. ಸಂಗಮೇಶ್ವರ ದೇವಸ್ಥಾನದ ಕಾರ್ತಿಕ ದೀಪೋತ್ಸವದ ಕಟ್ಟೆಪೂಜೆಗೆ ಸಿದ್ಧತೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಸುಜಯ್ ಅವರು ನಿನ್ನೆ ನಾಯಕವಾಡಿ ಚೆಕ್‌ಪೋಸ್ಟ್‌ಬಳಿ ಇರುವ ಕಟ್ಟೆಗೆ ಮಾವಿನ ತೋರಣ ಕಟ್ಟುವ ಸಲುವಾಗಿ ಮಾವಿನ ಮರಕ್ಕೆ ಹತ್ತಿ ಕೊಂಬೆ ಕಡಿಯುತ್ತಿದ್ದರು.

ಈ ವೇಳೆ ಮರದ ಕೊಂಬೆಯು ಅಲ್ಲೆ ಹಾದು ಹೋಗಿರುವ ವಿದ್ಯುತ್‌ ತಂತಿಯ ಮೇಲೆ ಬಿದ್ದಿದೆ. ಇದರಿಂದ ಆಕಸ್ಮಿಕವಾಗಿ ವಿದ್ಯುತ್‌ ಪ್ರವಹಿಸಿ ಸುಜಯ್‌ ಅವರಿಗೆ ತಗುಲಿದ್ದು, ಅಸ್ವಸ್ಥಗೊಂಡ ಅವರನ್ನು ಸ್ಥಳೀಯರ ಸಹಾಯದಿಂದ ಮರದಿಂದ ಇಳಿಸಿ ಕುಂದಾಪುರ ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಅಲ್ಲಿ ಪರೀಕ್ಷಿಸಿದ ವೈದ್ಯರು ಸುಜಯ್‌ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು