News Karnataka Kannada
Thursday, April 25 2024
Cricket
ಉಡುಪಿ

ಕರಾವಳಿಯಾದ್ಯಂತ ಬಿರುಸುಗೊಂಡ ಮಳೆ: ಹಲವೆಡೆ ಕಡಲ್ಕೊರೆತ

Heavy rains lash coastal areas: Sea erosion in Kadipatna
Photo Credit : News Kannada

ಪಡುಬಿದ್ರಿ: ಕರಾವಳಿಯಾದ್ಯಂತ ಮಳೆ ಬಿರುಸುಗೊಂಡಿದ್ದು ಕಡಲಾರ್ಭಟವು ಮುಂದುವರೆದಿದೆ. ಪಡುಬಿದ್ರಿ ಮುಖ್ಯ ಬೀಚ್ ಸೇರಿದಂತೆ ಕಾಡಿಪಟ್ಣ ಭಾಗದಲ್ಲಿ ಕಡಲ್ಕೊರೆತದ ಪ್ರಭಾವ ಹೆಚ್ಚಾಗಿದೆ. ಈಗಾಗಲೇ 6 ತೆಂಗಿನಮರಗಳು ಕಡಲ ಒಡಲು ಸೇರಿದೆ. ಮುಖ್ಯ ಬೀಚ್ ನ ಇಂಟರ್ಲಾಕ್, ಕೈರಂಪಣಿ ಗೋದಾಮು ಸಮುದ್ರ ಪಾಲಾಗುವ ಅಪಾಯದಲ್ಲಿದೆ.

ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಪಡುಬಿದ್ರಿ ಕಾಡಿಪಟ್ಣ ಮೊಗವೀರ ಸಭಾದ ಅಧ್ಯಕ್ಷರಾದ ಅಶೋಕ್ ಸಾಲ್ಯಾನ್, ಬ್ಲ್ಯೂ ಫ್ಲಾಗ್ ಮಾನ್ಯತೆ ದೊರಕಿದ ಬೀಚ್ ಸರ್ವನಾಶವಾಗುತ್ತಿದೆ. ಜಿಲ್ಲಾಡಳಿತ ಇದಕ್ಕೆ ತುರ್ತು ವ್ಯವಸ್ಥೆ ಕಲ್ಪಿಸಬೇಕಾಗಿದೆ. ಸುಶೀಲ್ ಕಾಂಚನ್ ರವರಿಗೆ ಸೇರಿದ ತೆಂಗಿನಮರಗಳು ಸಮುದ್ರ ಪಾಲಾಗಿದೆ. ಕೈರಂಪಣಿ ಗೋದಾಮು, ಪ್ರವಾಸಿಗರು ಆಸೀನವಾಗಲಿಕ್ಕಿರುವ ಮಂಟಪ ಅಪಾಯದ ಭೀತಿಯಲ್ಲಿದೆ.  ತೌಖ್ತೆ ಚಂಡಮಾರುತದ ಸಮಯದಲ್ಲಿಯೂ ಇಲ್ಲಿಗೆ ಭೇಟಿ ನೀಡಿದ ಕಂದಾಯ ಸಚಿವರಾದ ಅಶೋಕ್, ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ, ಮಾಜಿ ಶಾಸಕರಿಗೂ ಮನವಿ ಮಾಡಿದರೂ ಸ್ಪಂದನೆಯಿಲ್ಲ. ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು