News Karnataka Kannada
Sunday, April 14 2024
Cricket
ಉಡುಪಿ

ಮಠದಬೆಟ್ಟು ತೋಡಿಗೆ ಬಿದ್ದು ಹೋಟೆಲ್ ನೌಕರ ಮೃತ್ಯು

Bidar: Jescom employee dies of electrocution
Photo Credit : News Kannada

ಉಡುಪಿ: ವ್ಯಕ್ತಿಯೋರ್ವ ಕಾಲುಸಂಕದ ಮೇಲಿಂದ ಆಕಸ್ಮಿಕವಾಗಿ‌ ಕಾಲುಜಾರಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಮಠದಬೆಟ್ಟು ಎಂಬಲ್ಲಿ ನಡೆದಿದೆ.

ಮೃತನನ್ನು ಬೈಂದೂರು ಮೂಲದ ಮಠದಬೆಟ್ಟು ನಿವಾಸಿ 33ವರ್ಷದ ಸತೀಶ್ ಎಂದು ಗುರುತಿಸಲಾಗಿದೆ. ಈತ ಉಡುಪಿಯ ಪ್ರತಿಷ್ಠಿತ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದನು. ಇಂದು ಮಧ್ಯಾಹ್ನದ ಸುಮಾರಿಗೆ ಮಠದಬೆಟ್ಟು ತೋಡಿನಲ್ಲಿ ಸತೀಶ್ ಮೃತದೇಹ ಪತ್ತೆಯಾಗಿದೆ. ಸತೀಶ್ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದು, ಒಂದು ಮಗು ಇದೆ ಎಂದು ತಿಳಿಬಂದಿದೆ.

ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಮೃತದೇಹವನ್ನು ಮೇಲೆತ್ತಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು.

ಘಟನಾ ಸ್ಥಳಕ್ಕೆ ಎಸ್ಪಿ ಅಕ್ಷಯ್ ಮಚ್ಚೀಂದ್ರ, ಎಎಸ್ಪಿ ಸಿದ್ದಲಿಂಗಪ್ಪ ಭೇಟಿ ಪರಿಶೀಲನೆ ನಡೆಸಿದರು. ಉಡುಪಿ ನಗರ ಠಾಣೆ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು