News Karnataka Kannada
Saturday, May 11 2024
ಉಡುಪಿ

ವಿಡಿಯೋ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ: ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್

I have received information about the video incident: CID ADGP Manish Karbikar
Photo Credit : News Kannada

ಉಡುಪಿ: ವಿಡಿಯೋ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಉಡುಪಿ ಪೊಲೀಸರು ನಡೆಸಿದ ತನಿಖೆಯ ರಿಪೋರ್ಟ್ ಪಡೆದುಕೊಳ್ಳಲಾಗಿದೆ. ಪೊಲೀಸ್ ಮತ್ತು ಸಿಐಡಿ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆ ಮಾಡಿದ್ದೇನೆ ಎಂದು ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಹೇಳಿದರು‌.

ಉಡುಪಿಯ ಪ್ರವಾಸಿ ಮಂದಿರದಲ್ಲಿ ಇಂದು‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ಏನೇನು ತನಿಖಾ ಪ್ರಕ್ರಿಯೆ ನಡೆಸಬೇಕೆಂಬುವುದರ ಬಗ್ಗೆಯೂ ಚರ್ಚಿಸಲಾಗಿದೆ. ತನಿಖಾಧಿಕಾರಿಯಾಗಿ ಸಿಐಡಿ ಡಿವೈಎಸ್ಪಿ ಅಂಜುಮಾಲ ಅವರನ್ನು ನೇಮಕ ಮಾಡಲಾಗಿದೆ. ತನಿಖೆಯ ಮೇಲ್ವಿಚಾರಣೆಯನ್ನು ಸಿಐಡಿ ಎಸ್.ಪಿ ರಾಘವೇಂದ್ರ ಹೆಗಡೆ ನಡೆಸುತ್ತಾರೆ.  ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ತನಿಖಾಧಿಕಾರಿ ಕೈ ಸೇರಲಿದೆ. ಪ್ರಕರಣದ ತನಿಖೆ ಆದ ನಂತರ ಕೋರ್ಟಿಗೆ ಮುಂದಿನ ವರದಿ ಕೊಡುತ್ತೇವೆ. ಸಿಐಡಿ ತನಿಖೆ ಮುಂದುವರೆಯುತ್ತದೆ. ಮೂರು ಮೊಬೈಲ್ ಎಫ್ಎಸ್ಎಲ್ ವರದಿಯನ್ನು ತನಿಖೆಯ ಒಂದು ಭಾಗವಾಗಿ ನಾವು ತೆಗೆದುಕೊಳ್ಳುತ್ತೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು