Categories: ಉಡುಪಿ

ಮಕ್ಕಳಲ್ಲಿ ಸಂಸ್ಕಾರ ಬೆಳೆಸುವುದು ಅಗತ್ಯ: ಡಾ. ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ಇತ್ತೀಚಿನ ದಿನಗಳಲ್ಲಿ ಮಕ್ಕಳ ತಂದೆ ಹಾಗೂ ತಾಯಿ ಇಬ್ಬರೂ ಉದ್ಯೋಗದಲ್ಲಿರುವುದರಿಂದ ಮಕ್ಕಳಲ್ಲಿ ಬಾಂಧವ್ಯದ ಕೊರತೆ ಕಾಡುತ್ತಿದೆ. ಹೀಗಾಗಿ ಹೆತ್ತವರು ಮಕ್ಕಳಿಗೆ ಸಮಯವನ್ನು ಮೀಸಲಿಡಬೇಕು. ಮನೆಯಲ್ಲಿ ಹಿರಿಯರೊಂದಿಗೆ ಬೆರೆಯುವಂತೆ ಮಾಡಬೇಕು. ಸಂಸ್ಕಾರ ಕಲಿಸಬೇಕು ಎಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ, ಹಾಗೂ ತಾಲ್ಲೂರ್ಸ್ ಪ್ಯಾಮಿಲಿ ಟ್ರಸ್ಟ್ ನ ಪ್ರವರ್ತಕರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.

ಉಡುಪಿಯ ಆದರ್ಶ ಆಸ್ಪತ್ರೆ ಹಾಗೂ ವಿಜಯವಾಣಿ ಪತ್ರಿಕೆ ಸಹಯೋಗದೊಂದಿಗೆ ಆದರ್ಶ ಆಸ್ಪತ್ರೆಯಲ್ಲಿ ನಡೆದ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಹಾಗೂ ನ್ಯೂಟ್ರಿಷನ್ ಕೌನ್ಸಲಿಂಗ್, ಮಕ್ಕಳ ಫ್ಯಾನ್ಸಿ ಡ್ರೆಸ್ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಆದರ್ಶ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಜಿ. ಎಸ್. ಚಂದ್ರಶೇಖರ್ ಮಾತನಾಡಿ, ಇತ್ತೀಚೆಗೆ 5ರಿಂದ 15 ವರ್ಷದೊಳಗಿನ ಮಕ್ಕಳಲ್ಲಿ ಬೊಜ್ಜು ದೇಹ ಉಂಟಾಗುತ್ತಿದೆ. ಇದಕ್ಕೆ ಅತಿಯಾಗಿ ಜಂಕ್ ಪುಡ್ ಗಳ ಸೇವನೆ ಹಾಗೂ ಟಿವಿ ಮತ್ತು ಮೊಬೈಲ್ ಚಟುವಟಿಕೆಯಲ್ಲಿ ಮಕ್ಕಳು ಪಾಲ್ಗೊಳ್ಳುತ್ತಿರುವುದು ಕಾರಣವಾಗುತ್ತಿದೆ ಎಂದರು.

ಆದರ್ಶ ಆಸ್ಪತ್ರೆಯ ಸಿಇಒ ವಿಮಲಾ ಚಂದ್ರಶೇಖರ್ ಮಾತನಾಡಿ, ಮಕ್ಕಳ ಕೆಲಸದಲ್ಲಿ ತಾಯಿಯಾದವಳು ನಿರಾಸಕ್ತಿ ತಾಳಬಾರದು. ತಾಯಂದಿರಿಗೆ ತಾಳ್ಮೆ ಇರಬೇಕು. ಮಕ್ಕಳ ನಡವಳಿಕೆ ಬಗ್ಗೆ ಗಮನವಿಡಬೇಕು. ತಂದೆ & ತಾಯಿ ಹೇಗೆ ವರ್ತಿಸುತ್ತಾರೋ ಅದನ್ನೇ ಅನುಸರಿಸುತ್ತಾರೆ. ಹೀಗಾಗಿ ಪ್ರೀತಿಯಿಂದ ಮಕ್ಕಳ ಹೃದಯ ಗೆಲ್ಲಬೇಕು ಎಂದು ಸಲಹೆ ನೀಡಿದರು. ಮಕ್ಕಳ ತಜ್ಞ ಡಾ. ಗುರುಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

ಗಮನ ಸೆಳೆದ ಪ್ಯಾನ್ಸಿ ಡ್ರೆಸ್ ಸ್ಪರ್ಧೆ ಮಕ್ಕಳ ದಿನಾಚರಣೆ ನಿಮಿತ್ತ 1ರಿಂದ 5 ವರ್ಷದೊಳಗಿನ ಮಕ್ಕಳಿಗೆ ಫ್ಯಾನ್ಸಿ ಡ್ರೆಸ್ ಸ್ಪರ್ಧೆ ಆಯೋಜಿಸಲಾಗಿತ್ತು. 20ಕ್ಕೂ ಹೆಚ್ಚು ಚಿಣ್ಣರು ವಿವಿಧ ವೇಷ ಮತ್ತು ಭೂಷಣ ತೊಟ್ಟು ತಮ್ಮಲ್ಲಿರುವ ಪ್ರತಿಭೆ ತೋರ್ಪಡಿಸಿದರು.

ಸ್ಪರ್ಧೆಯಲ್ಲಿ ಆಕರ್ಷ್ ಪ್ರಥಮ, ಮಾನವ್ ಶೆಟ್ಟಿ ದ್ವೀತಿಯ, ಷಡಾನನ ಆಚಾರ್ಯ ಹಾಗೂ ವೇದಾಂಶ್ ಕೃಷ್ಣ ತೃತೀಯ ಸ್ಥಾನ ಗಳಿಸಿದರು. ಆದರ್ಶ ಆಸ್ಪತ್ರೆಯ ಸಿಇಒ ವಿಮಲಾ ಚಂದ್ರಶೇಖರ್ ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಿಸಿದರು. ಡಾ.ಮೋಹನದಾಸ್ ಶೆಟ್ಟಿ ಹಾಗೂ ರಂಜಿತಾ ನಾಯಕ್ ತೀರ್ಪುಗಾರರಾಗಿ ಪಾಲ್ಗೊಂಡಿದ್ದರು.

ಕಸಾಪ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಸ್ವಾಗತಿಸಿದರು. ಡಯಟಿಷಿಯನ್ ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು. ಆಸ್ಪತ್ರೆಯ ಸಹಪ್ರಬಂಧಕ ಪ್ರಕಾಶ ಡಿ.ಕೆ. ವಂದಿಸಿದರು.

Ashika S

Recent Posts

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

9 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

20 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

30 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

42 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

54 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

57 mins ago