ಉಡುಪಿ: ದೇವಸ್ಥಾನದ ಆವರಣದಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡುವುದು ತಪ್ಪು. ಮಂಗಳಾದೇವಿ ದೇವಸ್ಥಾನದಲ್ಲಿ ಮುಸ್ಲಿಮರಿಗೆ ಅವಕಾಶ ನೀಡಿರುವುದಕ್ಕೆ ತಮ್ಮ ಬೆಂಬಲ ಇಲ್ಲ ಎಂದು ಶ್ರೀರಾಮಸೇನೆಯ ಪ್ರಮೋದ್ ಮತಾಲಿಕ್ ಹೇಳಿದ್ದಾರೆ.
ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಹತ್ಯೆಗೆ ಬೆಂಬಲ ನೀಡುವವರು ಮುಸ್ಲಿಮರು. ಅವರು ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡಕೂಡದು. ಒಬ್ಬನೇ ದೇವರನ್ನು ನಂಬುವ ಅವರು, ಬಹುದೇವಾರಾಧನೆ ಮಾಡುವ ಹಿಂದೂಗಳ ದೇವಸ್ಥಾನದಲ್ಲಿ ವ್ಯಾಪಾರ ಮಾಡಿ ಲಾಭ ಗಳಿಸುವುದು ಸರಿಯೆ? ಎಂದು ಪ್ರಶ್ನಿಸಿದರು.
ಮಂಗಳಾದೇವಿ ಮಾತ್ರವಲ್ಲ, ಯಾವುದೇ ದೇವಸ್ಥಾನದ ಆವರಣದಲ್ಲೂ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು. ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಹೋರಾಟಕ್ಕೆ ತಮ್ಮ ಬೆಂಬಲ ಇದೆ ಎಂದು ಹೇಳಿದರು.