News Karnataka Kannada
Monday, May 06 2024
ಉಡುಪಿ

ಹಿರಿಯ ಪತ್ರಕರ್ತ, ಸಾಹಿತಿ ಶೇಖರ ಅಜೆಕಾರು ನಿಧನ

Journalist Shekhar Ajekar passes away
Photo Credit : News Kannada

ಕಾರ್ಕಳ : ಹಿರಿಯ ಪತ್ರಕರ್ತ, ಸಾಹಿತಿ ಶೇಖರ ಅಜೆಕಾರು (54) ಅವರು ಅ. 31ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಬೆಳಿಗ್ಗೆ ಅಜೆಕಾರಿನ ತನ್ನ ಮನೆಯಲ್ಲಿ ಕುಸಿದು ಬಿದ್ದ ಶೇಖರ್ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಈ ವೇಳೆಗಾಗಲೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಬೆಳದಿಂಗಳ ಸಾಹಿತ್ಯ ಸಮ್ಮೇಳನ, ಕವಿಗೋಷ್ಠಿಯಂಥ ವಿಭಿನ್ನ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಗಮನ ಸೆಳೆದಿದ್ದ ಶೇಖರ ಅಜೆಕಾರು ಮುಂಬಯಿಯಲ್ಲಿ ಪತ್ರಿಕೋದ್ಯಮ ಪ್ರಾರಂಭಿಸಿದವರು ಮುಂಬಯಿಯ ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ ಉಪಸಂಪಾದಕರಾಗಿದ್ದ ಅವರು ಬಳಿಕ ಮಂಗಳೂರಿನ ಜನವಾಹಿನಿಗೆ ಸೇರಿದ್ದರು.

ಅನಂತರ ಕನ್ನಡ ಪ್ರಭ ಸಹಿತ ಕೆಲವು ಪತ್ರಿಕೆಗಳಿಗೆ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚೆಗಿನ ಕೆಲವು ವರ್ಷಗಳಿಂದ ಪತ್ರಿಕೋದ್ಯಮ ಬಿಟ್ಟು ಪೂರ್ಣವಾಗಿ ಸಾಹಿತ್ಯ ಮತ್ತು ಸಂಘಟನೆಯ ಕೆಲಸಗಳಲ್ಲಿ ತೊಡಗಿದ್ದರು. ಹಲವಾರು ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿದ್ದ ಶೇಖ‌ರ ಅಜೆಕಾರು ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರಾಷ್ಟ್ರೀಯ ಬಸವಶ್ರೀ ಆವಾರ್ಡ್ 2018 ಕೃಷಿ ಬಂದು 2019 ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪ್ರಶಸ್ತಿ 2019 ವಿಶ್ವ ದರ್ಶನ ಸಾಹಿತ್ಯ ಪ್ರಶಸ್ತಿ 2019 ಶಿಖಾ ಭಾರತ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು ಮೃತರು ಪತ್ನಿ ಓರ್ವ ಪುತ್ರ ಹಾಗೂ ಓರ್ವ ಪ್ರಕ್ರಿಯನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು