News Karnataka Kannada
Monday, April 22 2024
Cricket
ಉಡುಪಿ

ಪತ್ರಕರ್ತರು ತಮ್ಮ ಮಕ್ಕಳ ಭವಿಷ್ಯದ ಬಗ್ಗೆಯೂ ಚಿಂತಿಸಬೇಕಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Journalists should also worry about the future of their children: Laxmi Hebbalkar
Photo Credit : News Kannada

ಉಡುಪಿ: ಸಮಾಜದ ಅಂಕು-ಡೊಂಕುಗಳನ್ನು ತಿದ್ದಿ,ಸಾಮರಸ್ಯ,ಸತ್ಯದ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಡುತ್ತಿರುವ ಪತ್ರಕರ್ತರು ಕುಟುಂಬವನ್ನು ತ್ಯಜಿಸಿ ರಾತ್ರಿ-ಹಗಲೆನ್ನದೇ ದುಡಿಯುತ್ತಾರೆ.ಸಮಾಜದ ಒಳಿತಿಗಾಗಿ ಸದಾ ಚಿಂತಿಸುವ ಪತ್ರಕರ್ತರು ಅವರ ಮಕ್ಕಳ ಭವಿಷ್ಯದ ಬಗ್ಗೆಯೂ ಚಿಂತಿಸಬೇಕಿದೆ ಎಂದು ರಾಜ್ಯ ಮಹಿಳಾ ಮತುತಿ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಲಹೆ ನೀಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಸಮಿತಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ಡಾ.ಟಿಎಂಎ ಪೈ ಆಡಿಟೋರಿಯಂನಲ್ಲಿ ಆಯೋಜಿಸಲಾದ ರಾಜ್ಯದ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಎರಡು ಕೈಗಳಿಂದ ಹೊತ್ತ ಸಂವಿಧಾನ ಪುಸ್ತಕವನ್ನು ಅನಾವರಣಗೊಳಿಸುವ ಮೂಲಕ ವಿಶಿಷ್ಟವಾಗಿ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದ ಅನೇಕ ಸಮಸ್ಯೆಗಳನ್ನು ವರದಿ ಮೂಲಕ ಬೆಳಕು ಚೆಲ್ಲುವ ಪತ್ರಕರ್ತರಿಗೂ ಸಾಕಷ್ಟು ಸಮಸ್ಯೆಗಳಿವೆ.ಈಗಲೂ ನಿವೇಶನಕ್ಕಾಗಿ ಪತ್ರಕರ್ತರು ಹಾತೊರೆಯುತ್ತಿದ್ದಾರೆ.ಪತ್ರಕರ್ತರ ಏಳಿಗೆಗಾಗಿ ಸರ್ಕಾರದ ಮಟ್ಟದಲ್ಲಿ ಮುಂದೆ ನಿಂತು ಮಾಡಿಸಿಕೊಡುತ್ತೇನೆ. ರಾತ್ರಿ-ಹಗಲು,ಚಳಿ-ಮಳೆ ಎನ್ನದೇ ಸುದ್ದಿ ಮಾಡುವ ಪತ್ರಕರ್ತರ ಶ್ರಮವನ್ನು ಕಣ್ಣಾರೆ ಕಂಡಿದ್ದೇನೆ.ಖಂಡಿತವಾಗಿಯೂ ನಿಮ್ಮೆಲ್ಲರ ಶ್ರಮಕ್ಕೆ ಫಲ ಸಿಗುತ್ತಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕರ್ತೆಯಾಗಿ ಆರಂಭಗೊಂಡ ನನ್ನ ರಾಜಕೀಯ ಜೀವನ ಇಂದು ಪ್ರತಿಭಾವಂತ ಜಿಲ್ಲೆಯ ಉಸ್ತುವಾರಿ ಸಚಿವೆಯಾಗಿ ನಿಮ್ಮ ಮುಂದೆ ನಿಂತಿದ್ದೇನೆ. ಇದು ನನ್ನ ಶ್ರಮಕ್ಕೆ ಸಿಕ್ಕ ಪ್ರತಿಫಲ.ತಂದೆ-ತಾಯಿ ಕಷ್ಟಪಟ್ಟು ತಮ್ಮ ಭವಿಷ್ಯದ ಬಗ್ಗೆ ಕನಸು ಕಂಡಿದ್ದಾರೆ.ಅವರ ಕನಸನ್ನು ನಢನಸು ಮಾಡುವ ಗುರುತರವಾದ ಜವಾಬ್ದಾರಿ ನಿಮ್ಮ ಮೇಲಿದೆ.ಅವರ ಕನಸನ್ನು ನನಸುಗೊಳಿಸಲು ನೀವೆಲ್ಲರೂ ಸನ್ನದ್ದರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕರ್ನಾಟಕ ವಿಧಾಸಭಾ ಸಭಾಪತಿ ಯು.ಟಿ ಖಾದರ್ ಮಾತನಾಡಿ, ನಮ್ಮ ಸಂಪ್ರದಾಯ,ಆಚಾರ-ವಿಚಾರಗಳು ಪಾರಂಪರಿಕವಾಗಿ ಬೆಳೆದು ನಿಲ್ಲಬೇಕಾದರೆ ಅದಕ್ಕೆ ಪತ್ರಕರ್ತರ ಕೊಡುಗೆ ಅಪಾರವಾದುದು.ಯುವ ಪೀಳಿಗೆಗೆ ನಮ್ಮ ಸಂಪ್ರದಾಯಗಳನ್ನು ವರ್ಗಾಯಿಸುವ ದೊಡ್ಡ ಶಕ್ತಿಯಾಗಿ ಮಾಧ್ಯಮದ ಪಾಲು ಬಹಳಷ್ಟಿವೆ ಎಂದರು.

ಪತ್ರಕರ್ತರು ಮತ್ತು ರಾಜಕಾರಣಿಗಳ ನಡುವೆ ಅವಿನಾಭಾವ ಸಂಬಂಧವಿದೆ. ಪತ್ರಕರ್ತರಿಲ್ಲದೇ ರಾಜಕಾರಣಿಗಳಿಲ್ಲ ಹಾಗೆಯೇ ರಾಜಕಾರಣಿಗಳಿಲ್ಲದೇ ಪತ್ರಕರ್ತರಿಲ್ಲ. ರಾಜಕೀಯದಲ್ಲಿ ಗೊಂದಲಗಳು ಉಂಟಾದಾಗ ಪತ್ರಕರ್ತರ ಸಲಹೆ,ಸೂಚನೆಗಳಿಂದ ಗೊಂದಲ ಬಗೆಹರಿದ ಅನೇಕ ಉದಾಹರಣೆಗಳಿವೆ.ನೂತನ ಶಾಸಕರಿಗೆ ತರಬೇತಿ ಕೊಟ್ಟಂತೆ ಪತ್ರಕರ್ತರಿಗೂ ತರಬೇತಿ ಕೊಡುವ ಅವಶ್ಯಕತೆ ಇದೆ ಎಂದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯ ಪತ್ರಕರ್ತರ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಣಿಪಾಲ ಮಾಹೆ ಪ್ರೊ ಚಾನ್ಸಲರ್ ಡಾ.ಎಚ್.ಎಸ್. ಬಲ್ಲಾಳ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಜಿಲ್ಲಾಧಿಕಾರಿ ಎಂ.ಕೂರ್ಮರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ ಮಚ್ಚಿಂದ್ರ ಹಾಕೆ ಮುಖ್ಯ ಅತಿಥಿಗಳಾಗಿದ್ದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಪುಂಡಲೀಕ ಬಿ. ಬಾಳೋಜಿ, ಅಜ್ಜಮಾಡ ರಮೇಶ್ ಕುಟ್ಟಪ್ಪ, ಭವಾನಿ ಸಿಂಗ್ ಠಾಕೂರು, ಕಾರ್ಯದರ್ಶಿಗಳಾದ ಮತ್ತಿಕೆರೆ ಜಯರಾಮ್, ಸೋಮಶೇಖರ್ ಕೆರಗೋಡು, ಕೋಶಾಧಿಕಾರಿ ವಾಸುದೇವ ಹೊಳ್ಳ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ ಸ್ವಾಗತಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯ ದರ್ಶಿ ಜೆ.ಸಿ.ಲೋಕೇಶ್ ಪುರಸ್ಕೃತರ ಪಟ್ಟಿ ವಾಚಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ದಾನಿಗಳ ಪಟ್ಟಿ ವಾಚಿಸಿದರು. ಪತ್ರಕರ್ತ ಕೆ.ಸಿ.ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು