ಉಡುಪಿ: ಕಲ್ಮಾಡಿ ಬಗ್ಗುಮುಂಡ ಬಗ್ಗು ಪಂಜುರ್ಲಿ ದೈವಸ್ಥಾನದ ಮೇಲ್ಚಾವಣಿ ನಿರ್ಮಾಣ ಸಮಿತಿ ಹಾಗೂ ದೇವಾಡಿಗ ಸಮಾಜ ಬಾಂಧವರ ಸಹಕಾರದಿಂದ ನಿರ್ಮಿಸಲ್ಪಟ್ಟ ಶ್ರೀ ಬಗ್ಗುಪಂಜುರ್ಲಿ ದೈವಸ್ಥಾನದ ಮೇಲ್ಚಾವಣಿ ಸಮರ್ಪಣಾ ಸಮಾರಂಭವು ಇಂದು ನಡೆಯಿತು.
ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ದೇವಾಡಿಗ ಸಮಾಜದ ಧರ್ಮಪಾಲ್ ದೇವಾಡಿಗ, ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್, ನಗರಸಭಾ ಸದಸ್ಯ ವಿಜಯ ಕೊಡವೂರು ಉಪಸ್ಥಿತರಿದ್ದರು.