News Karnataka Kannada
Monday, April 29 2024
ಉಡುಪಿ

ಕಾಪು: ಮಾರ್ಪಳ್ಳಿ ಪ್ರದೇಶದಲ್ಲಿ ಮತಯಾಚನೆ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ

Kapu: Gurme Suresh Shetty seeks votes in Marpalli area
Photo Credit : News Kannada

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಂಗ್ರಪಾಡಿ ಗ್ರಾಮದ ಮಾರ್ಪಳ್ಳಿ ಪ್ರದೇಶದಲ್ಲಿ ಮತಯಾಚನೆ ಮಾಡಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಮೆಂಡನ್ ರವರು ಮಾರ್ಪಳ್ಳಿ ಪ್ರದೇಶದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿ ಮುಂದಿನ ಅಭಿವೃದ್ಧಿ ಕಾರ್ಯಗಳನ್ನು ಗುರ್ಮೆ ಸುರೇಶ್ ಶೆಟ್ಟಿ ಯವರು ಇನ್ನು ಹೆಚ್ಚಾಗಿ ಮಾಡಲಿದ್ದಾರೆ ಎಂಬ ಭರವಸೆ ನೀಡಿದರು.

ನಂತರ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿ ಯವರು, ನರೇಂದ್ರ ಮೋದಿಯವರು ದೇಶಕ್ಕೆ ನೀಡಿರುವ ಕೊಡುಗೆಗಳ ವಿವರ ನೀಡಿ ಭಾರತ ದೇಶವು ಅವರ ಸಾರಥ್ಯದಲ್ಲಿ ವಿಶ್ವಗುರು ಅಗಲಿದೆ ಎಂಬ ಭರವಸೆ ನೀಡಿದರು.

ಈ ಸಂಧರ್ಭದಲ್ಲಿ ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಮಾರ್ಪಳ್ಳಿ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಹೇಮಂತ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಕಾರ್ಯದರ್ಶಿ ಅವಿನಾಶ್ ಶೆಟ್ಟಿಗಾರ್, ಅಭ್ಯರ್ಥಿ ಪ್ರಮುಖ್ ಅನಿಲ್ ಕುಮಾರ್, ಶಕ್ತಿ ಕೇಂದ್ರ ಪ್ರಮುಖ್ ಆಶಿಕ್, ಪಂಚಾಯತ್ ಸದಸ್ಯರಾದ ಪುಷ್ಪಲತಾ, ಶಾಂತ ನಾಯಕ್, ಉದ್ಯಾವರ ಪಂಚಾಯತ್ ಉಪಾಧ್ಯಕ್ಷರು ಬೇಬಿ ನಾಯಕ್, ಮಾರ್ಪಳ್ಳಿ ಭೂತ್ ಅಧ್ಯಕ್ಷ ಅಕ್ಷಯ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು