ಉಡುಪಿ: ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಶಿಲಾಮುಹೂರ್ತ ಹಾಗೂ ಜೀರ್ಣೋದ್ಧಾರದ ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಜೀರ್ಣೋದ್ಧಾರದ ಮನವಿ ಪತ್ರ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತ್ಯಜಿತ್ ಶೆಟ್ಟಿ, ದೇವಳದ ವಾಸ್ತುತಜ್ಞ ವಿದ್ವಾನ್ ಸುಬ್ರಹ್ಮಣ್ಯ ಭಟ್ ಗುಂಡಿಬೈಲು, ಮಜೂರು ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ.ಬಿ ಪುರಾಣಿಕ್, ಕಾಪು ಹೊಸಮಾರಿಗುಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಕಾರ್ಯಾಧ್ಯಕ್ಷ ಲೀಲಾದರ್ ಶೆಟ್ಟಿ, ಕೋಶಾಧಿಕಾರಿ ಕೆ. ಪದ್ಮನಾಭ ಶ್ಯಾನುಭಾಗ್, ಪ್ರಧಾನ ಕಾರ್ಯದರ್ಶಿ ನಾಗಭೂಷಣ್ ರಾವ್ ಉಪಸ್ಥಿತರಿದ್ದರು.