News Karnataka Kannada
Saturday, April 27 2024
ಉಡುಪಿ

ಕಾರ್ಕಳ: ಉದಯ ಶೆಟ್ಟಿ ಮುನಿಯಾಲು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ

Being involved in social work is highly commendable.
Photo Credit : News Kannada

ಕಾರ್ಕಳ: ನನಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಶ್ರೇಷ್ಠ ವ್ಯಕ್ತಿಗಳಲ್ಲಿ ದೇವರಂತಹ ಹೃದಯವಿರುತ್ತದೆ. ಆದ್ದರಿಂದ ಉದಯ ಶೆಟ್ಟಿ ಮುನಿಯಾಲು ಅವರು ಎಲ್ಲರ ಗೌರವಕ್ಕೆ ಪಾತ್ರರಾಗುತ್ತಾರೆ. ೫೦ರ ಹುಟ್ಟುಹಬ್ಬದ ಸಂಭ್ರಮದ ಜತೆಗೆ ರಕ್ತದಾನ ಶಿಬಿರ ಮತ್ತು ಸಾಧಕ ವಿದ್ಯಾರ್ಥಿಗಳ ಸನ್ಮಾನದಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಅತ್ಯಂತ ಶ್ಲಾಘನೀಯ ಎಂದು ಕೇಮಾರು ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹೇಳಿದ್ದಾರೆ.

ಅವರು ಉದಯ ಶೆಟ್ಟಿ ಮುನಿಯಾಲು ಅಭಿಮಾನಿ ಬಳಗ ಮತ್ತು ಬ್ಲಾಕ್ ಕಾಂಗ್ರೆಸ್ ಹೆಬ್ರಿ ಮತ್ತು ಕಾರ್ಕಳ ವತಿಯಿಂದ ಉದಯ ಶೆಟ್ಟಿ ಮುನಿಯಾಲು ಅವರ ೫೦ನೇ ಹುಟ್ಟುಹಬ್ಬದ ಪ್ರಯುಕ್ತ ಪುಲ್ಕೇರಿ ಲಕ್ಷ್ಮೀದೇವಿ ಕಲ್ಯಾಣ ಮಂಟಪದಲ್ಲಿ ಗುರುವಾರ ಆಯೋಜಿಸಿದ ಬೃಹತ್ ರಕ್ತದಾನ ಶಿಬಿರ ಮತ್ತು ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಜನಪ್ರತಿನಿಧಿಗಳು ಸರಕಾರದ ಅನುದಾನ ದೊರಕಿಸಿಕೊಡುವಲ್ಲಿಯೂ ಪತ್ನಿಯ ಕರಿಮಣಿ ಮಾರಿ ಕೊಟ್ಟಂತೆ ವರ್ತಿಸುತ್ತಾರೆ. ಅವರ ನಡುವೆ ಉದಯ ಶೆಟ್ಟಿ ಅವರು ದುಡಿಮೆಯ ಹಣದಲ್ಲಿ ನಿರಂತರ ಸಮಾಜ ಸೇವೆ ಗೈಯುತ್ತಿರುವುದನ್ನು ಸ್ವಾಮೀಜಿ ಪ್ರಶಂಸಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮಾತನಾಡಿ, ಉದಯ ಶೆಟ್ಟಿ ಅವರು ಕಾರ್ಕಳದ ಜನತೆಯ ಧ್ವನಿಯಾಗಬೇಕು. ಜನತೆಯ ಸಂಕಷ್ಟಕ್ಕೆ ಸ್ಪಂದಿಸುವಂತಹ ಕೆಲಸ ಮಾಡಬೇಕು ಎಂದರು.

ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಮಾತನಾಡಿ, ನಾವು ಶ್ರದ್ದೆ, ಭಕ್ತಿ ಮತ್ತು ನಿಯತ್ತಿನಿಂದ ಜೀವನ ನಡೆಸಿದಾಗ ಬದುಕಿನಲ್ಲಿ ಯಶಸ್ಸು ಸಾಧ್ಯವಾಗುತ್ತದೆ. ಕಾರ್ಕಳದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಪಕ್ಷವನ್ನು ಕಟ್ಟುವ ಕೆಲಸ ಮಾಡುತ್ತೇನೆ. ಕಾರ್ಯಕರ್ತರ ಬೇಡಿಕೆಗೆ ನಿರಂತರ ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು.

ಎಸ್‌ಡಿಸಿಸಿ ಬ್ಯಾಂಕಿನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಮುಂದಿನ ಬಾರಿ ಕಾರ್ಕಳದ ಶಾಸಕರಾಗಿ ಉದಯ ಶೆಟ್ಟಿ ಆಯ್ಕೆಯಾಗಬೇಕು. ನಿರಂತರ ಜನಸೇವೆಯ ಮೂಲಕ ಜನರ ಮನಸ್ಸನ್ನು ಗೆಲ್ಲಬೇಕು ಎಂದರು. ವೇದಿಕೆಯಲ್ಲಿ ಕೆಪಿಸಿಸಿ ಸದಸ್ಯರಾದ ನೀರೆ ಕೃಷ್ಣ ಶೆಟ್ಟಿ, ಸುರೇಂದ್ರ ಶೆಟ್ಟಿ ಹಿರಿಯಂಗಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ದೇವಾಡಿಗ, ಚಂದ್ರಶೇಖರ ಬಾಯಾರಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಮುಂಬೈ ಉದ್ಯಮಿಗಳಾದ ಗಿರೀಶ್ ಶೆಟ್ಟಿ ತೆಳ್ಳಾರ್, ಅಮಿತ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಬೃಹತ್ ರಕ್ತದಾನ ಮತ್ತು ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಉದಯ ಶೆಟ್ಟಿ ಅವರಿಗೆ ಸಾರ್ವಜನಿಕ ಅಭಿನಂದನೆ ನೆರವೇರಿತು.

ಶುಭದ ರಾವ್ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು, ಸುಧಾಕರ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು, ಸುಧಾಕರ ಶೆಟ್ಟಿ ಮುಡಾರು ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು