ಉಡುಪಿ

ಕಾರ್ಕಳ: ಅಪಪ್ರಚಾರಕ್ಕೆ ಕಿವಿಗೊಡದೆ, ಅಭಿವೃದ್ಧಿಗೆ ಆದ್ಯತೆ ನೀಡಿ – ಸಚಿವ ಸುನಿಲ್ ಕುಮಾರ್

ಕಾರ್ಕಳ: ಅತ್ಯಧಿಕ 236 ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಿರುವುದು ರಾಜ್ಯದಲ್ಲೆ ದಾಖಲೆಯಾಗಿದೆ. ಅಭಿವೃದ್ಧಿ ಕಾಮಗಾರಿಗಳು ಒಂದೇ ಗ್ರಾಮಕ್ಕೆ ಸೀಮಿತವಾಗದೆ ಕಾರ್ಕಳದ ಪ್ರತಿಯೊಂದು ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯ ನಡೆಸಲಾಗುವುದು. ಜನರು ಅಪಪ್ರಚಾರಕ್ಕೆ ಕಿವಿ ಕೊಡದೆ ಅಭಿವೃದ್ಧಿ ಕಡೆ ಆದ್ಯತೆ ನೀಡಿ ಬೆಂಬಲಿಸಬೇಕು ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು. ಇನ್ನಾ ಪೇಟೆಯಲ್ಲಿ ಇನ್ನಾ ಶಕ್ತಿ ಕೇಂದ್ರದ ಗ್ರಾಮ ಸಮಾವೇಶ-2023 ಕಾರ್ಯಕ್ರಮದಲ್ಲಿ ಮಾತನಾಡಿದರು.

ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುನಿರಾಜ್ ಶೆಟ್ಟಿ, ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಮಹಾವೀರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಜಯರಾಮ್ ಸಾಲಿಯನ್ ಬೋಳ, ಮುಂಡ್ಕೂರು ಮಹಾ ಶಕ್ತಿ ಕೇಂದ್ರದ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಿಜೆಪಿ ಉಡುಪಿ ಜಿಲ್ಲಾ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಇನ್ನಾ ಶಕ್ತಿ ಕೇಂದ್ರದ ಅಧ್ಯಕ್ಷ ದಿನೇಶ್ ಕೋಟ್ಯಾನ್, ವಾರ್ಡ್ ಸದಸ್ಯರಾದ ಮನೋಜ್, ಪ್ರಸಾದ್ ಶೆಟ್ಟಿ, ಪ್ರೇಮ ಕುಲಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇನ್ನಾ ಗ್ರಾಮಸ್ಥರ ಪರವಾಗಿ ಸಚಿವ ಸುನಿಲ್ ಕುಮಾರ್ ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಕಡೆಕುಂಜ ನಿವಾಸಿ ಪುಷ್ಪರಾಜ್ ಮೂಲ್ಯ ಬಿಜೆಪಿ ಸೇರ್ಪಡೆಗೊಂಡರು. ಇನ್ನಾ ಗ್ರಾಮ ಪಂಚಾಯತ್ ಸದಸ್ಯ ಚಂದ್ರಹಾಸ ಶೆಟ್ಟಿ ಸ್ವಾಗತಿಸಿ, ಶಕ್ತಿ ಕೇಂದ್ರದ ಅಧ್ಯಕ್ಷ ದಿನೇಶ್ ಕೋಟ್ಯಾನ್  ವಂದಿಸಿದರು. ಸುಕೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Ashika S

Recent Posts

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

3 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

22 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

38 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

50 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago