ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಗಾಂಧಿನಗರದಲ್ಲಿ ಡಿ.3ರಂದು ಸಂಜೆ ನಡೆದಿದೆ.
ನಲ್ಲೂರು ಗ್ರಾಮದ ಗಾಂಧಿನಗರ ನಿವಾಸಿ 57 ವರ್ಷದ ಗೋಪಾಲ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಡಿ. 3ರಂದು 3:30ರಿಂದ 4:30ರ ಮಧ್ಯಾವಧಿಯಲ್ಲಿ ಮನೆಯ ಬಳಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.