News Karnataka Kannada
Monday, April 29 2024
ಉಡುಪಿ

ಕಾರ್ಕಳ: ಮುಂಡ್ಕೂರು ಗ್ರಾಮದಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ

Karkala: Man commits suicide by pouring petrol inside his car in Mundkur village
Photo Credit : News Kannada

ಕಾರ್ಕಳ: ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.

ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ 46 ವರ್ಷದ ಕೃಷ್ಣ ಸಫಲಿಗ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು ತನ್ನ ಮಾರುತಿ ಒಮಿನಿ ಕಾರಿನ ಒಳಗೆ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೃಷ್ಣ ಸಫಲಿಗ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ನಿನ್ನೆ ರಾತ್ರಿ ತಮ್ಮನ ಮನೆಯಲ್ಲಿ ಮೆಂಹದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಿದ್ದ ನಂತರ ಈ ಘಟನೆ ನಡೆದಿದ್ದು, ಕಾರ್ಕಳ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು, ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು