ಕಾರ್ಕಳ: ಮುಂಬೈಯಲ್ಲಿ ಹೋಟೆಲ್ ಉದ್ಯಮಿಯಾಗಿದ್ದ ಮುಂಡ್ಕೂರು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಿವಾಸಿ ರಮೇಶ್ ಸಪಳಿಗ (68) ವರ್ಷ ಎಂಬವರ ಮೃತದೇಹ ಮುಂಡ್ಕೂರು ಶಾಂಭವಿ ಹೊಳೆಯಲ್ಲಿ ಪತ್ತೆಯಾಗಿದೆ.
ವಿಪರೀತ ಮಧ್ಯಪಾನದ ಚಟ ಹೊಂದಿದ್ದ ರಮೇಶ್ ಸಪಳಿಗ ಕೆಲವು ಸಮಯದ ಹಿಂದೆ ಸಹೋದರ ಅನಾರೋಗ್ಯದ ಪೀಡಿತರಾದ ಹಿನ್ನಲೆ ಊರಿಗೆ ಬಂದವರು ವಾಪಸು ಹೋಗಿರಲಿಲ್ಲ. ಮಾರ್ಚ್ 29 ರಂದು ರಾತ್ರಿ 9 ಗಂಟೆಗೆ ಮಧ್ಯಪಾನ ಮಾಡಲೆಂದು ಮನೆಯಿಂದ ಹೋದವರು ವಾಪಸ್ ಮನೆಗೆ ಬಂದಿರಲಿಲ್ಲ. ಇಂದು ಬೆಳಿಗ್ಗೆ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿ ಇರುವ ನಾಗಬನದ ಹತ್ತಿರದ ಶಾಂಭವಿ ನದಿಯಲ್ಲಿ ಮೃತ ದೇಹ ಸಿಕ್ಕಿದೆ. ಮಧ್ಯಪಾನ ಮಾಡಿ ಬರುವಾಗ ಆಕಸ್ಮಿಕವಾಗಿ ಹೊಳೆಗೆ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
ರಮೇಶ್ ಸಪಳಿಗ ಅವರ ಪುತ್ರ ಯೋಗಿಶ್ ಸಪಳಿಗ ನೀಡಿದ ದೂರಿನ ಪ್ರಕಾರ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…