News Karnataka Kannada
Sunday, April 28 2024
ಉಡುಪಿ

ಕಾರ್ಕಳ: ಕಾರು ಅಪಘಾತ, ಉಡುಪಿ ಮೂಲದ ಇಬ್ಬರು ಶಿಕ್ಷಕರ ಸಾವು

Two Udupi-based teachers killed in car accident
Photo Credit : News Kannada

ಕಾರ್ಕಳ: ಹೆಬ್ರಿ ತಾಲೂಕಿನ ಸೀತಾನದಿ ಜಕ್ಕನಮಕ್ಕಿ ಬಳಿ ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟು, ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮಶೇಖರ ಮೃತರೆಂದು ಗುರುತಿಸಲಾಗಿದೆ.

ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ.

ಇನ್ನು ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಂಬುಲೆನ್ಸ್ ಸಿಗದೆ ಯಾರು ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆ ಸೇರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು