Categories: ಉಡುಪಿ

ಕಾವ್ರಾಡಿ ಗ್ರಾಪಂ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕುಂದಾಪುರ: ಬಸವ ವಸತಿ ಯೋಜನೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕಾವರಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯನ್ನು ಉಡುಪಿ ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿದ್ದಾರೆ. ಕಾವ್ರಾಡಿ ಗ್ರಾಪಂ ಕಾರ್ಯದರ್ಶಿ ಗೋಪಾಲ ದೇವಾಡಿಗ ಬಂಧಿತ ಆರೋಪಿ.

ಕಾವರಾಡಿಯ ಜಾವೆದ್ ಎಂಬವರು ಬಸವ ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಗೋಪಾಲ ದೇವಾಡಿಗ 15 ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದರು. ಲಂಚ ನೀಡಲು ಇಷ್ಟ ಇಲ್ಲದ ಜಾವೇದ್ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು. ಅದರಂತೆ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು, ಜಾವೇದ್ ಅವರಿಂದ 15ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಕಾರ್ಯದರ್ಶಿಯನ್ನು ವಶಕ್ಕೆ ಪಡೆದುಕೊಂಡರು.

ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್‌ ಹಾಗೂ ರಫೀಕ್ ಮತ್ತು ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರಾಘವೇಂದ್ರ, ಮಲ್ಲಿಕಾ, ಲೋಹಿತ್, ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ರಮೇಶ್, ಸೂರಜ್, ಸುಧೀರ್, ಸತೀಶ್ ಆಚಾರ್ಯ ಈ ಕಾರ್ಯಾ ಚರಣೆ ನಡೆಸಿದ್ದರು.

Ashika S

Recent Posts

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

11 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

33 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

59 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

1 hour ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

2 hours ago