News Karnataka Kannada
Tuesday, April 30 2024
ಉಡುಪಿ

ಶಿಕ್ಷಕರ ಕೊರತೆ: ಕೋಡಿಬೆಂಗ್ರೆ ಹಿರಿಯ ಪ್ರಾಥಮಿಕ ಶಾಲೆಗೆ ಬೀಗ ಜಡಿದು ಪ್ರತಿಭಟನೆ

Kodibengre higher primary school shuts down over shortage of teachers
Photo Credit : News Kannada

ಕೋಡಿಬೆಂಗ್ರೆ: ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನ ವರ್ಗಾವಣೆಯನ್ನು ವಿರೋಧಿಸಿ ಹಾಗೂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ಗ್ರಾಮಸ್ಥರು ಇಂದು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಶಾಲೆಯಲ್ಲಿ ಈಗಾಗಲೇ ಶಿಕ್ಷಕರ ಕೊರತೆಯಿದೆ. ಹೀಗಿದ್ದರೂ ಇದೀಗ ಓರ್ವ ಶಿಕ್ಷಕರನ್ನು ವರ್ಗಾವಣೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದ್ದು ಇದಕ್ಕೆ ಗ್ರಾಮಸ್ಥರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಇಲ್ಲಿ ಒಂದನೇ ತರಗತಿಯಿಂದ ಏಳನೇ ತರಗತಿಯವರೆಗೆ ಒಟ್ಟು ಎಂಭತ್ತು ವಿದ್ಯಾರ್ಥಿಗಳು ಕಲಿಯುತ್ತಿದ್ದು ಈ ಮುಂಚೆ ಮೂವರು ಶಿಕ್ಷಕರಿದ್ದರು. ಇದೀಗ ಅವರಲ್ಲಿ ಓರ್ವ ಶಿಕ್ಷಕರನ್ನು ವರ್ಗಾವಣೆ ಮಾಡಲು ಸರ್ಕಾರ ಹೊರಟಿದೆ.

ಸರಕಾರಿ ಶಾಲೆಯನ್ನು ನೇರವಾಗಿ ಮುಚ್ಚದೆ ಹಿಂಬದಿಯಿಂದ ಮುಚ್ಚಲು ಪ್ರಯತ್ನಿಸಲಾಗುತ್ತಿದೆ. ಸರಕಾರಿ ಶಾಲೆಗೆ ಶಿಕ್ಷಕರನ್ನು ಕೊಡುತ್ತಿಲ್ಲ. ಇದರಿಂದ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾಗುತ್ತಿದೆ. ನ್ಯಾಯಯುತವಾದ ಬೇಡಿಕೆಯಿಟ್ಟಾಗ ನಮ್ಮನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ. ನಮಗೆ ನ್ಯಾಯ ದೊರಕಿಸಿಕೊಡಬೇಕು. ಈ ಶಾಲೆಗೆ ಏಳು ಶಿಕ್ಷಕರ ಅಗತ್ಯವಿದೆ. ಬಡ ಕೂಲಿ ಕಾರ್ಮಿಕರ ಮಕ್ಕಳು, ಮೀನುಗಾರರ ಮಕ್ಕಳು ಶಿಕ್ಷಣ ವಂಚಿತರಾಗುವುದರಿಂದ ತಡೆಯಬೇಕಿದೆ. ನಮ್ಮ ಬೇಡಿಕೆ ಈಡೇರುವ ತನಕ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು