News Karnataka Kannada
Wednesday, May 08 2024
ಉಡುಪಿ

ಕೋಟೇಶ್ವರ: ಖಾಸಗಿ ಬಸ್ ಡಿಕ್ಕಿ ಹೊಡೆದು ಪಾದಚಾರಿ ಸಾವು

ಪರಪ್ಪನ ಅಗ್ರಹಾರದಲ್ಲಿ ಒಂದೇ ಮನೆಯಲ್ಲಿದ್ದ ವಿಚ್ಛೇದಿತ ಮಹಿಳೆ ಬಿಟ್ಟುಹೋಗಿದ್ದಕ್ಕೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ.18ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Photo Credit : Pixabay

ಕೋಟೇಶ್ವರ: ಖಾಸಗಿ ಎಕ್ಸ್ ಪ್ರೆಸ್ ಬಸ್ ವೊಂದು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ‌ಯೊಬ್ಬರು‌ ಮೃತಪಟ್ಟ ಘಟನೆ ಕೊಟೇಶ್ವರ ಗ್ರಾಮದ ಅಂಕದಕಟ್ಟೆಯ ಸರ್ಜನ್‌‌ ಆಸ್ಪತ್ರೆಯ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಡಿ.3ರಂದು ಸಂಜೆ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ಗೋವಿಂದ ನಾಯ್ಕ್ ಎಂದು ಗುರುತಿಸಲಾಗಿದೆ. ಇವರು‌ ನಿನ್ನೆ ಸಂಜೆ ಅಂಕದಕಟ್ಟೆಯ ಸರ್ಜನ್‌‌ ಆಸ್ಪತ್ರೆಯ ಬಳಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದರು. ಈ ವೇಳೆ ಆರೋಪಿ ಕಿರಣ್‌ ಕುಮಾರ್‌ ಎಂಬಾತನು ಬಸ್ ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಗೋವಿಂದ ನಾಯ್ಕ್ ಗೆ ಡಿಕ್ಕಿ‌ ಹೊಡೆದಿದ್ದಾನೆ.

ಇದರಿಂದ ಗೋವಿಂದ ನಾಯ್ಕ್ ತಲೆಗೆ‌ ಗಂಭೀರ ಗಾಯವಾಗಿದ್ದು, ಕೂಡಲೇ ಅವರನ್ನು ಅಂಕದಕಟ್ಟೆ ಸರ್ಜನ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ಗೋವಿಂದ ನಾಯ್ಕ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು