News Karnataka Kannada
Monday, April 29 2024
ಉಡುಪಿ

“ಕೃಷಿ ಮೇಳ 2023” ಉದ್ಘಾಟಿಸಿದ ಗುರ್ಮೆ ಸುರೇಶ್ ಶೆಟ್ಟಿ

Padubidri: Krishi Mela 2023 inaugurated
Photo Credit : News Kannada

ಉಡುಪಿ: ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ಹಾಗೂ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಇದರ ಜಂಟಿ ಸಹಯೋಗದೊಂದಿಗೆ ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ಬಳಿ ಇಂದಿನ ಆಯೋಜಿಸಲಾದ ಕೃಷಿ ಮೇಳ 2023 ಅನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು.

ಮೂಡುಬಿದಿರೆ ಜೈನ ಮಠದ ಭಾರತಭೂಷಣ ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಯು.ಪಿ.ಸಿ.ಎಲ್ ಅಧ್ಯಕ್ಷ ಕಿಶೋರ್ ಆಳ್ವ, ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ, ಪಲಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಯೇಶ್ ಪೈ, ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೋಹನ್ ಸುವರ್ಣ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮೋಹನ್ ರಾಜ್, ತೋಟಗಾರಿಕೆ ಇಲಾಖೆಯ ಎಲ್. ಹೇಮಂತ್ ಕುಮಾರ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು