ಉಡುಪಿ: ಬಟ್ಟೆ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದ ಯುವತಿಯೋರ್ವಳು ಬಳಿಕ ವಾಪಸ್ ಬಾರದೆ ನಾಪತ್ತೆಯಾಗಿರುವ ಘಟನೆ ಉಡುಪಿಯ ಬಡಗುಬೆಟ್ಟುವಿನ ಇಂದಿರಾ ನಗರದಲ್ಲಿ ನಡೆದಿದೆ.
18 ವರ್ಷದ ನಿಖಿತಾ ನಾಪತ್ತೆಯಾದ ಯುವತಿ. ಈಕೆ ಕುಕ್ಕಿಕಟ್ಟೆ ಇಂದಿರಾ ನಗರದಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಿದ್ದಳು. ನ.28ರಂದು ಬೆಳಿಗ್ಗೆ 10:30ರ ಸುಮಾರಿಗೆ ಬಟ್ಟೆ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದಳು. ಆದರೆ, ಬಳಿಕ ವಾಪಾಸು ಬಾರದೆ ಕಾಣೆಯಾಗಿದ್ದಾಳೆ. ಸಂಬಂಧಿಕರ ಮನೆ, ಎಲ್ಲಾ ಕಡೆ ಹುಡುಕಾಡಿದರೂ ಈವರೆಗೆ ಸುಳಿವು ಪತ್ತೆಯಾಗಿಲ್ಲ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.