ಕುಂದಾಪುರ: ಬೈಕ್ ಡಿಕ್ಕಿ ಹೊಡೆದು ಬಾಲಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರದ ಕಂಡ್ಲೂರಿನಲ್ಲಿ ನಡೆದಿದೆ.
ಆರನೇ ತರಗತಿ ಓದುತ್ತಿರುವ ಮೊಹಮ್ಮದ್ ವಾಹಿದ್ ಗಾಯಗೊಂಡ ವಿದ್ಯಾರ್ಥಿ. ಈತ ರಸ್ತೆ ದಾಟುತ್ತಿದ್ದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದ ಮೊಹಮ್ಮದ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿದೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.