ಕುಂದಾಪುರ: ಬೈಂದೂರು ವಿಧಾನಸಭೆ ಕ್ಷೇತ್ರದ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಡಗುಡ್ಡೆಯಂಗಡಿ, ಬಡಾಕೆರೆ, ಸೇನಾಪುರ ಮತ್ತು ತಾರಿಬೇರು ಭಾಗದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತಕರು ಬಿಜೆಪಿ ಪಕ್ಷವನ್ನು ಶುಕ್ರವಾರ ಸೇರ್ಪಡೆಯಾಗುವುದರ ಮುಖೇನ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ.
ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿ ಪ್ರದೇಶದ ಗ್ರಾಮಗಳಲ್ಲಿ ಬಿಜೆಪಿ ಪಕ್ಷದ ಶಾಸಕರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನೆಚ್ಚಿಕೊಂಡು ಯುವಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಯುವ ಕಾರ್ಯಕರ್ತರ ಸೇರ್ಪಡೆಯಿಂದ ಈ ಭಾಗದಲ್ಲಿ ಬಿಜೆಪಿಗೆ ಇನ್ನಷ್ಟು ಶಕ್ತಿ ತುಂಬಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಹೇಂದ್ರ ಪೂಜಾರಿ, ಸುರೇಶ್ ಶೆಟ್ಟಿ, ಅಶೋಕ ಶೆಟ್ಟಿ, ಮಂಜುನಾಥ ಪೂಜಾರಿ ಬೆಳ್ಳಾಡಿ ಮತ್ತಿತರರು ಉಪಸ್ಥಿತರಿದ್ದರು.