Categories: ಉಡುಪಿ

ಕುಂದಾಪುರ: ಗುರುರಾಜ್ ಗಂಟಿಹೊಳೆ ಬೈಂದೂರು ಚೌಕೀದಾರ್- ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ಜನಸಾಮಾನ್ಯರ ನೋವು, ನಲಿವುಗಳನ್ನು, ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಬಲಿಷ್ಟವಾಗಿ ಮಂಡನೆ ಮಾಡುವ ತಾಕತ್ತನ್ನು ಹೊಂದಿರುವ ರಾಷ್ಟ್ರೀಯತೇಯ ಮನೋಭಾವದಿಂದ ಕೆಲಸವನ್ನು ಮಾಡುತ್ತಿರುವ ಬೈಂದೂರು ಚೌಕಿದಾರ್ ಗುರುರಾಜ್ ಗಂಟಿಹೊಳೆಯವರ ವಿಜಯಕ್ಕೆ ಕಾರ್ಯಕರ್ತರು ಶಕ್ತಿಮಿರಿ ಪ್ರಯತ್ನಿಸಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬೈಂದೂರು ವಿಧಾನಸಭೆ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಗುರುರಾಜ ಗಂಟಿಹೊಳೆ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಗುರುವಾರ ಬೈಂದೂರುನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಇದು ವ್ಯಕ್ತಿಗಳ ನಡುವೆ ನಡೆಯುವ ಚುನಾವಣೆ ಅಲ್ಲಾ ಸೈದ್ಧಾಂತಿಕ ನಿಲುವಿನೊಂದಿಗೆ ನಡೆಯುವ ಚುನಾವಣೆ ಆಗಿದೆ. ಯುವಜನರ ರಣೋತ್ಸವ ನೋಡಿದರೆ ಗಂಟಿಹೊಳೆ ಅವರನ್ನು ಗೆಲ್ಲಿಸುವ ಸಂಕಲ್ಪವನ್ನು ಮಾಡಿದ್ದಾರೆ ಎನ್ನುವುದಕ್ಕೆ ಸಮಾವೇಶದಲ್ಲಿ ಸೇರಿದ ಜನಸಾಗರದ ಮೂಲಕ ಉತ್ತರ ಸಿಕ್ಕಿದೆ.ವ್ಯಕ್ತಿಗತವಾಗಿ ಯಾರನ್ನು ನಾನು ಭಯೋತ್ಪಾದಕ ಎಂದು ಹೇಳಿಲ್ಲ ಗೋಪಾಲ ಪೂಜಾರಿ ಅವರನ್ನು ಬೆಂಬಲಿಸುವ ಪಕ್ಷ ಭಯೋತ್ಪಾದಕರಿಗೆ ಸಹಕಾರ ನೀಡುತ್ತದೆ ಎಂದು ಹೇಳಿದ್ದೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಸಣ್ಣ ಸಣ್ಣ ಜಾತಿಗಳ 21 ಅಭಿವೃದ್ಧಿ ನಿಗಮಗಳನ್ನು ಜಾರಿ ಮಾಡಿದ್ದೇವೆ,ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಮಾಡಿದ್ದೆ ಬಿಜೆಪಿ ಸರಕಾರ. ರಾಜಕಾರಣಿಗಳ ವಿರೋಧಿಗಳಿಗೆ ಗಂಟಿಹೊಳೆ ಅವರು ಹೆದರುವ ಪ್ರಮಯವೇ ಇಲ್ಲ ಎಂದರು.

ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ ದೇಶ, ರಾಷ್ಟ್ರೀಯತೆ ಎನ್ನುವ ಮನೋಭಾವದಿಂದ ಒಗ್ಗಟ್ಟಿನಿಂದ ಹೋರಾಟಮಾಡಿ ಬಡವರ ಮನೆ ಹುಡುಗನಿಗೆ ಜನಸೇವೆ ಮಾಡಲು ಒಂದು ಒಳ್ಳೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.ಬೈಂದೂರಿನಲ್ಲಿ ಕುಡಿಯುವ ನೀರಿನ ದಾಹವನ್ನು ನಿಗಿಸಲು 780 ಕೋಟಿ.ರೂ ವೆಚ್ಚದಲ್ಲಿ ಮನೆ ಮನೆಗೆ ಕುಡಿಯುವ ನೀರನ್ನು ಒದಗಸಿಕೊಡುವ ಕೆಲಸ ನಡೆಯುತ್ತಿದೆ ಎಂದರು.

ಸಚಿವ ಸುನೀಲ್ ಕುಮಾರ್ ಮಾತನಾಡಿ ಬಿ.ಎಂ ಸುಕುಮಾರ ಶೆಟ್ಟಿ ಅವರ ಕಾಲದಲ್ಲಿ ಬೈಂದೂರು ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳು ನಡೆದಿದೆ ಅವರ ಕಾರ್ಯಗಳು ಮುಂದುವರಿಯ ಬೇಕಾದರೆ ಬಿಜೆಪಿ ಅಭ್ಯರ್ಥಿ ಶಾಸಕ ನಾಗಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದರೆ ಕರಾವಳಿ ಜನರು ಅನುಭವಿಸಬೇಕಾಗುತ್ತದೆ ಇದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಕೇಳಿಕೊಂಡರು.

ಬೈಂದೂರು ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಮತ್ತು ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿದರು.

ಈ ಸಂದರ್ಭದಲ್ಲಿ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ,ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಬ್ರಿಜೇಶ್ ಚೌಟಾಲ, ಪ್ರಣಯ್ ಕುಮಾರ್ ಶೆಟ್ಟಿ,ಅಡಂತ್ಯಾಯ,ಸುರೇಶ್ ಶೆಟ್ಟಿ, ಸುರೇಶ ಬಟವಾಡಿ, ಪ್ರಿಯದರ್ಶಿನಿ, ರೋಹಿತ್ ಕುಮಾರ್ ಶೆಟ್ಟಿ,ವಿವಿಧ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಸದಾನಂದ ಉಪ್ಪಿನಕುದ್ರು ಸ್ವಾಗತಿಸಿದರು.ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ತಟಸ್ಥರಾಗಿ ಅಸಮಾಧಾನ: ಬೈಂದೂರು ಕ್ಷೇತ್ರದ ಹಾಲಿ ಶಾಸಕರಾದ ಬಿ.ಎಂ ಸುಕುಮಾರ್ ಶೆಟ್ಟಿ ಹಾಗೂ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬು ಹೆಗ್ಡೆ, ಉದ್ಯಮಿ ಗೋವಿಂದ ಬಾಬು ಪೂಜಾರಿ, ನಿತಿನ್ ನಾರಾಯಣ್ ಅವರು ಗುರುರಾಜ್ ಗಂಟಿಹೊಳೆ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಹಾಗೂ ಬಹಿರಂಗ ಸಭೆಯಲ್ಲಿ ಭಾಗವಹಿಸದೆ ತಟಸ್ಥ ರಾಗಿದ್ದು ಪಕ್ಷದ ಚಟುವಟಿಕೆಗಳಿಗೆ ಯಾವುದೇ ರೀತಿಯ ಬೆಂಬಲ ಇಲ್ಲಿ ತನಕ ಘೋಷಣೆ ಮಾಡಿಲ್ಲ.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago