ಕುಂದಾಪುರ: ಬೈಂದೂರು ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿರುವ ಗುರುರಾಜ್ ಗಂಟಿಹೊಳೆ ಅವರು ಗುರುವಾರ ಬೈಂದೂರು ಆಡಳಿತ ಕಚೇರಿಯಲ್ಲಿ ಚುನಾವಣೆ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ನಟಿ ತಾರಾ, ಪ್ರಭಾರಿ ಬ್ರಿಜೇಶ್ ಚೌಟ , ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಹರಿದು ಬಂದ ಜನಸಾಗರ
ಬೈಂದೂರು ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಸ್ಪರ್ಧೆ ಮಾಡಲಿರುವ ಗುರುರಾಜ್ ಗಂಟಿಹೊಳೆ ಅವರು ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಮೆರವಣಿಗೆಯಲ್ಲಿ ಬೃಹತ್ ಜನಸಾಗರವೇ ಹರಿದು ಬಂದಿದೆ. ಬೈಂದೂರು ಪೇಟೆ ಕೇಸರಿ ಮಯವಾಗಿದ್ದು ಕಾರ್ಯಕರ್ತರು ಹುಮ್ಮಸ್ಸಿನಿಂದ ಬಿರುಬಿಸಿಲಿನಲ್ಲಿ ಕಾಲ್ನಡಿಗೆ ಮೂಲಕ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು