ಕುಂದಾಪುರ: ಅತ್ಯುತ್ತಮ ಸಾಧನೆಯನ್ನು ತೋರಿದ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕಾರ್ಯಕ್ಕೆ 3 ರಾಜ್ಯ ಮಟ್ಟದ ಪ್ರಶಸ್ತಿ ದೊರೆತಿದೆ.
ಮಹಾತ್ಮ ಗಾಂಧಿ ನರೇಗಾ ಯೋಜನೆಯ 2022-23ನೇ ಸಾಲಿನ ಉತ್ತಮ ಆಡಳಿತ ಪಂಚಾಯತ್ ಪುರಸ್ಕಾರಕ್ಕೆ ಕುಂದಾಪುರ ತಾಲೂಕು ಪಂಚಾಯತ್ ಹಾಗೂ ಅತ್ಯುತ್ತಮ ಗ್ರಾಮ ಪಂಚಾಯತ್ ಪುರಸ್ಕಾರಕ್ಕೆ ಹಕ್ಲಾಡಿ ಗ್ರಾಮ ಪಂಚಾಯತ್ ಮತ್ತು ಜಲ ಸಂಜೀವಿನಿ ಪಂಚಾಯತ್ ಪುರಸ್ಕಾರ ಪ್ರಶಸ್ತಿಗೆ ಹೆಬ್ರಿ ತಾಲೂಕಿನ ವರಂಗ ಗ್ರಾಮ ಪಂಚಾಯಿತಿಗೆ ರಾಜ್ಯ ಮಟ್ಟದ ಪ್ರಶಸ್ತಿ ದೊರೆತಿದೆ.
ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ, ಸಹಾಯ ನಿರ್ದೇಶಕ ರಾಜೇಶ್,ಹಕ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಚೇತನ್ ಮೊಗವೀರ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರ ಬಿಲ್ಲವ ಅವರು ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡರು.